×
Ad

‘ಕೋವಿಡ್ ಮರಣ ಪರಿಶೋಧನಾ ತಂಡ’ ಪುನರ್ ರಚನೆ

Update: 2025-06-18 18:37 IST

ಸಾಂದರ್ಭಿಕ ಚಿತ್ರ | PC : freepik.com

ಬೆಂಗಳೂರು : ರಾಜ್ಯ ಸರಕಾರವು ಕೋವಿಡ್ 19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ರಾಜ್ಯ ಕೋವಿಡ್ ಮರಣ ಪರಿಶೋಧನಾ ತಂಡವನ್ನು ಪುನರ್ ರಚನೆ ಮಾಡಿ, ಆದೇಶ ಹೊರಡಿಸಿದೆ.

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿರುವ(ಬಿಎಂಸಿಆರ್‌ಐ) ಶ್ವಾಸಕೋಶದ ಔಷಧಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಶಶಿಭೂಷಣ್ ಬಿ.ಎಲ್. ಅಧ್ಯಕ್ಷತೆಯಲ್ಲಿ ತಂಡವನ್ನು ರಚನೆ ಮಾಡಲಾಗಿದೆ.

ರಾಜ್ಯ ಕೋವಿಡ್ ಮರಣ ಪರಿಶೋಧನಾ ತಂಡದಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕ, ಜಂಟಿ ನಿರ್ದೇಶಕ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರು ಸೇರಿದಂತೆ 15 ಮಂದಿ ಸದಸ್ಯರು ಇರಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News