×
Ad

ಕರ್ನಾಟಕ ಪಬ್ಲಿಕ್ ಶಾಲೆ, ಬೆಂಗಳೂರು ಪಬ್ಲಿಕ್ ಶಾಲೆ ಹಾಗೂ ಪಿ.ಎಂ.ಶಾಲೆಗಳಲ್ಲಿ ದ್ವಿ-ಭಾಷಾ ತರಗತಿಗಳ ದಾಖಲಾತಿ ಮಿತಿ ಹೆಚ್ಚಳ

Update: 2025-06-20 22:56 IST

ಸಾಂದರ್ಭಿಕ ಚಿತ್ರ | PC : freepik

ಬೆಂಗಳೂರು : ರಾಜ್ಯದ ಕರ್ನಾಟಕ ಪಬ್ಲಿಕ್ ಶಾಲೆಗಳು(ಕೆಪಿಎಸ್), ಬೆಂಗಳೂರು ಪಬ್ಲಿಕ್ ಶಾಲೆಗಳು(ಬಿಪಿಎಸ್) ಮತ್ತು ಪಿ.ಎಂ. ಶಾಲೆಗಳಲ್ಲಿ ದ್ವಿ-ಭಾಷಾ ಮಾಧ್ಯಮದ ತರಗತಿಗಳಿಗೆ ಮಕ್ಕಳ ಗರಿಷ್ಠ ದಾಖಲಾತಿ ಮಿತಿ ಹೆಚ್ಚಳ ಮಾಡಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ವಿದ್ಯಾರ್ಥಿಗಳ ದಾಖಲಾತಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪರಿಗಣಿಸಿ ರಾಜ್ಯ ಸರಕಾರ ಈ ಕ್ರಮ ಕೈಗೊಳ್ಳಲಾಗಿದೆ. ಪೂರ್ವ ಪ್ರಾಥಮಿಕ ವಿಭಾಗದಲ್ಲಿ(ಎಲ್‍ಕೆಜಿ ಮತ್ತು ಯುಕೆಜಿ) ಪ್ರತಿ ತರಗತಿಗೆ ಗರಿಷ್ಠ 40 ಮಕ್ಕಳು, ಪ್ರಾಥಮಿಕ ಶಾಲೆಗಳಲ್ಲಿ(1 ರಿಂದ 7ನೇ ತರಗತಿ) ಗರಿಷ್ಠ 50 ಹಾಗೂ ಪ್ರೌಢ ಶಾಲೆಗಳಲ್ಲಿ(8 ರಿಂದ 10ನೇ ತರಗತಿ) ಗರಿಷ್ಠ 50 ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಅನುಮತಿಸಲಾಗಿದೆ. ಈ ಮೊದಲು, ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ತರಗತಿಗಳಿಗೆ ಗರಿಷ್ಠ ದಾಖಲಾತಿ ಮಿತಿಯನ್ನು 30 ವಿದ್ಯಾರ್ಥಿಗಳಿಗೆ ಸೀಮಿತಗೊಳಿಸಲಾಗಿತ್ತು.

ಪೂರ್ವ ಪ್ರಾಥಮಿಕ ವಿಭಾಗದ ಪ್ರತಿ ತರಗತಿಯ ಶಿಕ್ಷಕ/ಶಿಕ್ಷಕಿಯ ಜತೆ ಒಬ್ಬ ಆಯಾ ಕಡ್ಡಾಯವಾಗಿ ಇರಬೇಕು. ಶಾಲಾ ಆವರಣದಲ್ಲಿ ಲಭ್ಯವಿರುವ ಕಟ್ಟಡಗಳು, ಇನ್ನಿತರ ಸಂಪನ್ಮೂಲಗಳನ್ನು ಬಳಸಿಕೊಂಡು ಮಕ್ಕಳ ದಾಖಲಾತಿ ಹಾಗೂ ವಿದ್ಯಾಭ್ಯಾಸಕ್ಕಾಗಿ ಎಲ್ಲ ರೀತಿಯ ಅವಕಾಶಗಳನ್ನು ಕಲ್ಪಿಸಬೇಕು ಎಂಬ ಷರತ್ತುಗಳನ್ನು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಪ್ರಸ್ತುತ ಕೆಪಿಎಸ್‍ಗಳಲ್ಲಿ ದ್ವಿ-ಭಾಷಾ ತರಗತಿಗಳಿಗೆ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳವಾಗಿದ್ದು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‍ಡಿಎಂಸಿ), ಪೋಷಕರು ಹಾಗೂ ಜನಪ್ರತಿನಿಧಿಗಳಿಂದ ದಾಖಲಾತಿ ಮಿತಿ ಹೆಚ್ಚಿಸುವಂತೆ ನಿರಂತರ ಬೇಡಿಕೆ ಇತ್ತು. ಅದರಂತೆ ಸರಕಾರ ಕ್ರಮ ವಹಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News