ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸದಸ್ಯರ ನೇಮಕ
Update: 2025-06-21 22:39 IST
ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರನ್ನು ನೇಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೂಚನೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಲ್ಲಿ ಖಾಲಿಯಿರುವ ಸದಸ್ಯರ ಸ್ಥಾನಗಳಿಗೆ ನಿವೃತ್ತ ಐಜಿಪಿ ಅರ್ಕೇಶ್, ವಕೀಲ ಶಿವಣ್ಣ ಗೌಡ, ಸಹಾಯಕ ಪ್ರಾಧ್ಯಾಪಕ ಡಾ.ಸುಮನಾ ಬಿ., ನಿವೃತ್ತ ಪ್ರಾಂಶುಪಾಲ ಡಾ.ಸಿ.ಎಂ.ಕುಂದಗೋಳ ಅವರನ್ನು ನೇಮಿಸಿ ಎಂದು ಸಿಎಂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೂಚನೆ ನೀಡಿದ್ದಾರೆ