ನ್ಯಾಯಾಲಯಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಸಲು ಸುತ್ತೋಲೆ
Update: 2025-06-21 23:55 IST
ಬೆಂಗಳೂರು : ಬೆಂಗಳೂರಿನಲ್ಲಿರುವ ಹೈಕೋರ್ಟ್ ಪ್ರಧಾನ ಪೀಠ, ಧಾರವಾಡ ಹಾಗೂ ಕಲಬುರಗಿಯಲ್ಲಿರುವ ಹೈಕೋರ್ಟ್ ಪೀಠಗಳು ಮತ್ತು ಎಲ್ಲ ಜಿಲ್ಲಾ ನ್ಯಾಯಾಲಯಗಳ ‘ಕೋರ್ಟ್ ಹಾಲ್’ಗಳಲ್ಲಿ ಸೂಕ್ತ ಸ್ಥಳದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಅಳವಡಿಸುವಂತೆ ಹೈಕೋರ್ಟ್‌ನ ರಿಜಿಸ್ಟ್ರಾರ್ ಕೆ.ಎಸ್.ಭರತ್ ಕುಮಾರ್ ಜೂ.19ರಂದು ಸುತ್ತೋಲೆ ಹೊರಡಿಸಿದ್ದಾರೆ.