×
Ad

ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಹೊಸದಿಲ್ಲಿ ಪ್ರಯಾಣ?

Update: 2025-06-22 22:02 IST

ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರ ಜನ್ಮದಿನದ ಹಿನ್ನೆಲೆಯಲ್ಲಿ ಅವರಿಗೆ ಶುಭ ಕೋರುವ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ(ಜೂ.23) ಹೊಸದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಇದೇ ವೇಳೆ ಕರ್ನಾಟಕದ ಹಲವು ವಿಧೇಯಕಗಳು ರಾಷ್ಟ್ರಪತಿಗಳ ಅಂಕಿತಕ್ಕೆ ಬಾಕಿ ಇದ್ದು, ಈ ಕುರಿತು ರಾಷ್ಟ್ರಪತಿ ದ್ರೌಪತಿ ಮುರ್ಮು ಅವರ ಭೇಟಿ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಸ್ತಾಪಿಸುವ ಸಾಧ್ಯತೆಗಳಿವೆ ಎಂದು ಗೊತ್ತಾಗಿದೆ.

ಅಲ್ಲದೆ, ವಿಧಾನ ಪರಿಷತ್‍ನ ನಾಲ್ಕು ಸ್ಥಾನಗಳಿಗೆ ನಾಮ ನಿರ್ದೇಶನಕ್ಕೆ ಶಿಫಾರಸ್ಸು ಮಾಡಿದ್ದ ಹೆಸರುಗಳನ್ನು ಹೈಕಮಾಂಡ್ ತಡೆ ಹಿಡಿದಿದ್ದು, ಈ ಕುರಿತು ವರಿಷ್ಠರನ್ನು ಭೇಟಿ ಮಾಡಿ ಸಿದ್ದರಾಮಯ್ಯ ಅವರ ಚರ್ಚಿಸಲಿದ್ದಾರೆ ಎಂದು ಹೇಳಲಾಗಿದೆ.

ಜತೆಗೆ ಸರಕಾರ ಅಧಿಕಾರಕ್ಕೆ ಬಂದು 2 ವರ್ಷ ಪೂರ್ಣಗೊಳ್ಳುತ್ತಿದ್ದು, ನಿಗಮ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಗಳ ಬದಲಾವಣೆ ಸಂಬಂಧವು ವರಿಷ್ಟರ ಜತೆ ಸಮಾಲೋಚನೆ ನಡೆಸಲಿದ್ದಾರೆ. ಅಲ್ಲದೆ, ಸಂಪುಟ ಪುನರ್ ರಚನೆ ಬಗ್ಗೆಯೂ ಕಾಂಗ್ರೆಸ್ ವಲಯದಲ್ಲಿ ಚರ್ಚೆ ನಡೆಯುತ್ತಿದ್ದು, ಈ ಕುರಿತು ಹೈಕಮಾಂಡ್ ಜತೆ ಮಾತುಕಥೆ ನಡೆಸಲಿದ್ದಾರೆಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News