ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು : ಉನ್ನತ ಶಿಕ್ಷಣ ಇಲಾಖೆಯ ಸರಕಾರದ ಕಾರ್ಯದರ್ಶಿ ಡಾ.ಕೆ.ಜಿ.ಜಗದೀಶ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರಕಾರದ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ಸೋಮವಾರ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಅಲ್ಲದೇ, ಜಗದೀಶ ಅವರಿಗೆ ಉನ್ನತ ಶಿಕ್ಷಣ ಇಲಾಖೆಯ ಸರಕಾರದ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಲಾಗಿದೆ.
ರಾಜ್ಯ ಶಾಲಾ ಶಿಕ್ಷಣ ಹಾಗೂ ಮೌಲ್ಯಮಾಪನ ಮಂಡಳಿಯ ಮುಖ್ಯಸ್ಥ ಎಚ್.ಬಸವರಾಜೇಂದ್ರ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುಂತೆ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಸಾರ್ವಜನಿಕ ನಿರ್ದೇಶನಾಲಯ(ಮಧ್ಯಾಹ್ನದ ಬಿಸಿಯೂಟ)ದ ನಿರ್ದೇಶಕ ಪ್ರಕಾಶ್ ಜಿ.ಟಿ.ನಿಟ್ಟಾಲಿ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಶಾಲಾ ಶಿಕ್ಷಣ ಹಾಗೂ ಮೌಲ್ಯಮಾಪನ ಮಂಡಳಿಯ ಮುಖ್ಯಸ್ಥರನ್ನಾಗಿ ವರ್ಗಾವಣೆ ಮಾಡಲಾಗಿದೆ. ಅಲ್ಲದೇ, ಪ್ರಕಾಶ್ ಜಿ.ಟಿ.ನಿಟ್ಟಾಲಿ ಅವರಿಗೆ ಸಾರ್ವಜನಿಕ ನಿರ್ದೇಶನಾಲಯ(ಮಧ್ಯಾಹ್ನದ ಬಿಸಿಯೂಟ)ದ ನಿರ್ದೇಶಕ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.