×
Ad

ಡಿಸಿಇಟಿ: ಮೊದಲ ಸುತ್ತಿನ ಕೌನ್ಸೆಲಿಂಗ್ ನಾಳೆಯಿಂದ ಆರಂಭ

Update: 2025-07-02 22:19 IST

ಬೆಂಗಳೂರು: ಡಿಪ್ಲೊಮಾ ಅಭ್ಯರ್ಥಿಗಳಿಗೆ ಎಂಜಿನಿಯರಿಂಗ್‍ನ 2ನೇ ವರ್ಷ ಅಥವಾ 3ನೇ ಸೆಮಿಸ್ಟರ್‍ಗೆ ನೇರ ಪ್ರವೇಶ ಕಲ್ಪಿಸುವ ಸಂಬಂಧ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ನಾಳೆಯಿಂದ(ಜು.3) ಆರಂಭಿಸಿದ್ದು, ಫಲಿತಾಂಶವನ್ನು ಜು.9ರಂದು ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಬುಧವಾರ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪ್ರಕಟನೆ ಹೊರಡಿಸಿದ್ದು, ಅಭ್ಯರ್ಥಿಗಳು ತಮಗೆ ಬೇಕಾದ ಕೋರ್ಸ್ ಹಾಗೂ ಕಾಲೇಜುಗಳನ್ನು ಆಯ್ಕೆ ಮಾಡಿಕೊಂಡು, ಆದ್ಯತಾ ಕ್ರಮದಲ್ಲಿ ದಾಖಲಿಸಲು ಜು.5ರಂದು ಬೆಳಿಗ್ಗೆ 11ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಜು.7ರಂದು ಅಣಕು ಸೀಟು ಹಂಚಿಕೆ ಫಲಿತಂಶವನ್ನು ಪ್ರಕಟಿಸಲಾಗುತ್ತದೆ. ಬಳಿಕ ಅಭ್ಯರ್ಥಿಗಳು ತಮ್ಮ ಇಚ್ಛೆ/ಆಯ್ಕೆಗಳನ್ನು ಬದಲಿಸಿಕೊಳ್ಳಲು ಜು.8ರಂದು ಸಂಜೆ 4ಗಂಟೆವರೆಗೆ ಅವಕಾಶ ಇರುತ್ತದೆ. ಅಂತಿಮವಾಗಿ ಜು.9ರಂದು ಸೀಟು ಹಂಚಿಕೆ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದರು.

ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಛಾಯ್ಸ್ ಅನ್ನು ಆಯ್ಕೆ ಮಾಡಲು ಜು.10ರಿಂದ 13ರವರೆಗೆ ಅವಕಾಶ ಇರುತ್ತದೆ. ಛಾಯ್ಸ್-1 ಮತ್ತು 2 ಅನ್ನು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ಚಲನ್ ಡೌನ್ ಲೋಡ್ ಮಾಡಿಕೊಳ್ಳಬಹುದು. ಛಾಯ್ಸ್ -1 ಆಯ್ಕೆ ಮಾಡಿ ಶುಲ್ಕ ಪಾವತಿಸಿದ ಅಭ್ಯರ್ಥಿಗಳು ಸೀಟು ಖಾತರಿ ಚೀಟಿ ಡೌನ್‍ಲೋಡ್ ಮಾಡಿಕೊಂಡು ಜು.16ರೊಳಗೆ ಸಂಬಂಧಪಟ್ಟ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಪ್ರಸನ್ನ ಅವರು ವಿವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News