×
Ad

ನಾನು ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಹಾಕಿಲ್ಲ : ಡಿ.ಕೆ.ಸುರೇಶ್

Update: 2025-07-03 22:07 IST

ಬೆಂಗಳೂರು : ‘ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ಅಧ್ಯಕ್ಷ ಸ್ಥಾನ ಸೇರಿದಂತೆ ನಾನು ಯಾವುದೇ ಸ್ಥಾನಕ್ಕೆ ಅರ್ಜಿ ಹಾಕಿಲ್ಲ. ನನಗೆ ಈ ಬಗ್ಗೆ ಮಾಹಿತಿ ಇಲ್ಲ. ನನ್ನ ಮುಂದೆ ಈ ವಿಚಾರ ಚರ್ಚೆಯೂ ಆಗಿಲ್ಲ. ಈ ಬಗ್ಗೆ ತೀರ್ಮಾನ ಮಾಡುವವರು ನಿರ್ದೇಶಕರುಗಳು, ಸರಕಾರ, ಮುಖ್ಯಮಂತ್ರಿ ಹಾಗೂ ಪಕ್ಷ’ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ತಿಳಿಸಿದರು.

ಗುರುವಾರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಂಜೇಗೌಡ ನಮ್ಮ ಹಿರಿಯ ನಾಯಕರು. ನಾನು ಅವರ ಪರವಾಗಿ ಬೆಂಬಲವಾಗಿ ನಿಂತಿದ್ದೆ. ಅದರಲ್ಲಿ ಎರಡು ಮಾತಿಲ್ಲ. ಸಧ್ಯಕ್ಕೆ ನನ್ನನ್ನು ಬಮೂಲ್ ಅಧ್ಯಕ್ಷ ಸ್ಥಾನದಲ್ಲಿದ್ದು, ನಾನು ಆ ಜವಾಬ್ದಾರಿ ನಿಭಾಯಿಸುತ್ತಿದ್ದೇನೆ. ನೀವೆಲ್ಲರೂ ನಂದಿನಿ ಹಾಲು, ತುಪ್ಪ ಬಳಸಿ. ರೈತರನ್ನು ಉಳಿಸಿ ಎಂದು ಮನವಿ ಮಾಡಿದರು.

ಅನ್ಯಾಯವಾಗುವುದಿಲ್ಲ: ಬೆಂಗಳೂರು ದೊಡ್ಡ ನಗರ, ಬಾಗಿಲು ತಟ್ಟಿದರೆ ಬಾಗಿಲು ತೆಗೆಯಲ್ಲ, ಸಾಕಷ್ಟು ಬಾರಿ ಮನೆಯಲ್ಲಿ ಇರುವುದಿಲ್ಲ. ಸಾಕಷ್ಟು ಸಮಸ್ಯೆಗಳಿವೆ. ಈ ಸಮಸ್ಯೆಗಳ ಜೊತೆ ಕೆಲಸ ಮಾಡಬೇಕಿದೆ. ಏನೇ ಕೆಲಸ ಮಾಡಬೇಕಾದರೂ ಶೇ.5-10ರಷ್ಟು ಲೋಪಗಳು ಆಗುತ್ತವೆ. ಅದನ್ನು ಸರಿಪಡಿಸಿಕೊಂಡು ಕೆಲಸ ಮಾಡುವುದು ಎಲ್ಲರ ಕರ್ತವ್ಯ ಎಂದು ‘ಒಳಮೀಸಲಾತಿ’ ಸಮೀಕ್ಷೆ ಕುರಿತು ಅವರು ಪ್ರತಿಕ್ರಿಯೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News