×
Ad

ರವಿಕುಮಾರ್ ವಿರುದ್ಧ ರಾಜ್ಯಪಾಲರು ಸ್ವಯಂಪ್ರೇರಿತರಾಗಿ ಕ್ರಮ ಕೈಗೊಳ್ಳಲಿ: ಸಚಿವ ಭೋಸರಾಜು ಆಗ್ರಹ

Update: 2025-07-04 11:12 IST

 ಎನ್.ರವಿಕುಮಾರ್

ಬೆಂಗಳೂರು: ರಾಜ್ಯ ಸರಕಾರದ ಆಡಳಿತಾತ್ಮಕ ಮುಖ್ಯಸ್ಥರಾಗಿರುವಂತಹ ಮುಖ್ಯ ಕಾರ್ಯದರ್ಶಿ ಹಾಗೂ ಒಬ್ಬ ಮಹಿಳೆಯ ಬಗ್ಗೆ ಕೀಳು ಹೇಳಿಕೆ ನೀಡಿರುವ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ವಿರುದ್ದ ಕಠಿಣ ಕ್ರಮದ ಅಗತ್ಯವಿದೆ. ಈ ನಿಟ್ಟಿನಲ್ಲಿ ರಾಜ್ಯಪಾಲರು ಸ್ವಯಂ ಪ್ರೇರಿತರಾಗಿ ಕ್ರಮ ಕೈಗೊಳ್ಳಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ವಿಧಾನ ಪರಿಷತ್ ಸಭಾ ನಾಯಕ ಎನ್. ಎಸ್. ಭೋಸರಾಜು ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಸಚಿವರು, ಮಹಿಳೆಯರ ಬಗ್ಗೆ ಅಸಭ್ಯ ಮತ್ತು ಮಾನಹಾನಿಕರ ಹೇಳಿಕೆ ನೀಡುವುದನ್ನು ರವಿಕುಮಾರ್ ಹವ್ಯಾಸವನ್ನಾಗಿಸಿಕೊಂಡಿದ್ದಾರೆ. ಸಂಸ್ಕೃತಿ ಬಗ್ಗೆ ಗೊಡ್ಡು ಕಾಳಜಿಯನ್ನು ತೋರಿಸುವ ಇವರದ್ದು ಇದೇನಾ ಸಂಸ್ಕೃತಿ ಎಂದು ಪ್ರಶ್ನಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News