ನಟ ಕಮಲ್ ಹಾಸನ್ ಕನ್ನಡ ವಿರೋಧಿ ಹೇಳಿಕೆಗೆ ನಿರ್ಬಂಧ
Update: 2025-07-05 00:58 IST
ಕಮಲ್ ಹಾಸನ್ | PTI
ಬೆಂಗಳೂರು: ಕನ್ನಡ ವಿರೋಧಿ ಹೇಳಿಕೆ ನೀಡದಂತೆ ನಿರ್ಬಂಧಿಸಿ ನಟ ಕಮಲ್ ಹಾಸನ್‌ಗೆ ಬೆಂಗಳೂರಿನ ನ್ಯಾಯಾಲಯ ಆದೇಸಿದೆ.
ಕಮಲ್ ಹಾಸನ್ ಕನ್ನಡ ವಿರೋಧಿ ಹೇಳಿಕೆ ನಿರ್ಬಂಧ ಕೋರಿ ಮಹೇಶ್ ಜೋಶಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನಗರದ 31ನೇ ಸಿಟಿ ಸಿವಿಲ್ ನ್ಯಾಯಾಲಯ, ಕನ್ನಡ ಭಾಷೆಯ ಮೇಲೆ ಭಾಷಾಶಾಸ್ತ್ರಜ್ಞರ ಶ್ರೇಷ್ಠತೆಯನ್ನು ಪ್ರತಿಪಾದಿಸುವ ಯಾವುದೇ ಹೇಳಿಕೆ ಅಥವಾ ಟೀಕೆಗಳನ್ನು ಪೋಸ್ಟ್ ಮಾಡುವುದು, ನೀಡುವುದು, ಬರೆಯುವುದು, ಪ್ರಕಟಿಸುವುದು ಅಥವಾ ವಿತರಿಸುವುದರಿಂದ ಅಥವಾ ಮುಂದಿನ ವಿಚಾರಣೆಯ ದಿನಾಂಕದವರೆಗೆ ನಿರ್ಬಂಧಿಸಲಾಗಿದೆ. ಅಲ್ಲದೆ, ಸಮನ್ಸ್ ಜಾರಿಗೊಳಿಸಿ ಆದೇಶಿದೆ.