ಆಶಾ ಕಾರ್ಯಕರ್ತೆಯರಿಗೆ ಗೌರವಧನ ಪಾವತಿಸಲು ಅನುದಾನ ಬಿಡುಗಡೆ
Update: 2025-07-10 21:13 IST
ಬೆಂಗಳೂರು : ರಾಜ್ಯ ಸರಕಾರವು 2025-26ನೇ ಸಾಲಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಪಾವತಿಸಲು 61.50 ಕೋಟಿ ರೂ.ಗಳಷ್ಟು ಎರಡನೇ ತ್ರೈಮಾಸಿಕ ಅನುದಾನವನ್ನು ಬಿಡುಗಡೆ ಮಾಡಿದೆ.
ಸರಕಾರವು ಬಿಡುಗಡೆ ಮಾಡಿರುವ ಅನುದಾನವನ್ನು ಯಾವ ಉದೇಶಕ್ಕಾಗಿ ಬಿಡುಗಡೆ ಮಾಡಲಾಗಿದೆಯೋ ಅದೇ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳುವ ಷರತ್ತುಗಳಿಗೊಳಪಟ್ಟಿದ್ದು, ನ್ಯಾಯಸಮ್ಮತವಾಗಿ ಬಳಸಿಕೊಂಡಿರುವ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.