×
Ad

ಈದಿನ ಯೂಟ್ಯೂಬ್ ಬ್ಲಾಕ್‌ ತೆರವುಗೊಳಿಸುವಂತೆ ಹೈಕೋರ್ಟ್‌ ಮಧ್ಯಂತರ ಆದೇಶ

Update: 2025-07-23 21:21 IST

ಬೆಂಗಳೂರು : ಈದಿನ ಡಾಟ್ ಕಾಮ್ ಯೂಟ್ಯೂಬ್ ಬ್ಲಾಕ್ ಮಾಡಲು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.

ಧರ್ಮಸ್ಥಳ ಮತ್ತು ಸೌಜನ್ಯ ವಿಷಯಕ್ಕೆ ಸಂಬಂಧಿಸಿದ ಸುದ್ದಿ ಪ್ರಕಟಿಸದಂತೆ ಇದ್ದ ಸಿವಿಲ್ ಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದಾರೆಂದು ಆರೋಪಿಸಿ ಧರ್ಮಸ್ಥಳದ ಕೆಲವರು ಈದಿನ ಡಾಟ್ ಕಾಮ್ ಯೂಟ್ಯೂಬ್ ನಿರ್ಬಂಧ ವಿಧಿಸುವಂತೆ ಈ ಹಿಂದೆ ಹೈಕೋರ್ಟ್ ಮೆಟ್ಟಿಲೇರಿದ್ದನ್ನು ಏಕಸದಸ್ಯಪೀಠವು ಎತ್ತಿ ಹಿಡಿದಿತ್ತು. ನ್ಯಾಯಾಲಯದ ಈ ಆದೇಶದ ಬೆನ್ನಲ್ಲೇ ಈದಿನ ಚಾನೆಲ್ ಅನ್ನು ಯೂಟ್ಯೂಬ್ ಕೂಡ ಜುಲೈ 10ರಿಂದ ಬ್ಲಾಕ್ ಮಾಡಿತ್ತು.

ಇದನ್ನು ಪ್ರಶ್ನಿಸಿ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದ ಈದಿನ ತಂಡವು, ಯೂಟ್ಯೂಬ್ ಬ್ಲಾಕ್ ತೆರವುಗೊಳಿಸುವಂತೆ ನಿರ್ದೇಶನ ನೀಡುವಂತೆ ಕೋರಿ ಮನವಿ ಸಲ್ಲಿಸಿತ್ತು. ಅರ್ಜಿಯನ್ನು ಇಂದು (ಜು.23) ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಾಧೀಶ ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠವು ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿದೆ. ಅಲ್ಲದೇ, ಬ್ಲಾಕ್ ಅನ್ನು ತೆರವುಗೊಳಿಸುವಂತೆ ಯೂಟ್ಯೂಬ್‌ಗೆ ನಿರ್ದೇಶನ ನೀಡಿದೆ.

ಈ ಬಗ್ಗೆ ಇನ್ನಷ್ಟೇ ಅಧಿಕೃತ ಆದೇಶವನ್ನು ಹೈಕೋರ್ಟ್ ಪ್ರಕಟಿಸಲಿದೆ.

ಈ ದಿನ ಡಾಟ್ ಕಾಮ್ ತಂಡದ ಪರವಾಗಿ ಹೈಕೋರ್ಟ್‌ನಲ್ಲಿ ವಕೀಲರಾದ ಕ್ಲಿಪ್ಟನ್ ಡಿ ರೊಝಾರಿಯೋ, ಮೈತ್ರೇಯಿ ಕೃಷ್ಣನ್ ವಾದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News