ರಾಜ್ಯದ ಐವರು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರು: ಇಂದು ಬೆಳಗ್ಗೆ ಐವರು ಸರಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಆದಾಯಕ್ಕಿಂತಲೂ ಅಧಿಕ ಗಳಿಕೆ, ಭ್ರಷ್ಟಾಚಾರದ ಆರೋಪದಡಿ ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ ಹಾಗೂ ಚಿತ್ರದುರ್ಗದ ವಿವಿಧೆಡೆ ಸರಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದ್ದು, ಶೊಧ ಕಾರ್ಯ ಮುಂದುವರಿಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ಎನ್. ವೆಂಕಟೇಶ್ - ಕಂದಾಯ ಅಧಿಕಾರಿ, ಬಿಬಿಎಂಪಿ ದಾಸರಹಳ್ಳಿ ಉಪವಲಯ, ಬೆಂಗಳೂರು
ಓಂಪ್ರಕಾಶ್ - ಹಿರಿಯ ಸಹಾಯಕ ನಿರ್ದೇಶಕ, ತೋಟಗಾರಿಕೆ ಇಲಾಖೆ, ಬೆಂಗಳೂರು
ಜಯಣ್ಣ. ಆರ್ - ಕಾರ್ಯಪಾಲಕ ಇಂಜಿನಿಯರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಹಾಸನ
ಎಂ. ಆಂಜನೇಯಮೂರ್ತಿ- ಕಿರಿಯ ಇಂಜಿನಿಯರ್, ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ
ಡಾ. ವೆಂಕಟೇಶ್ - ತಾಲೂಕು ಆರೋಗ್ಯಾಧಿಕಾರಿ, ಹಿರಿಯೂರು, ಚಿತ್ರದುರ್ಗ
ಈ ಅಧಿಕಾರಿಗಳಿಗೆ ಸಂಬಂಧಿಸಿದಸ್ಥಳಗಳಲ್ಲಿ ದಾಳಿ ನಡೆಸಲಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.