×
Ad

ಚಿಕ್ಕ ವಯಸ್ಸಿನಲ್ಲೇ ಮೂರು ಚುನಾವಣೆಯಲ್ಲಿ ಎಡವಿದ್ದೇನೆ : ನಿಖಿಲ್ ಕುಮಾರಸ್ವಾಮಿ

Update: 2025-03-08 23:10 IST

ಬೆಂಗಳೂರು : ನಾನು ಚಿಕ್ಕ ವಯಸ್ಸಿನಲ್ಲಿ ಮೂರು ಚುನಾವಣೆಯಲ್ಲಿ ಎಡವಿದ್ದೇನೆ. ಚುನಾವಣೆಯಲ್ಲಿ ಏಳುಬೀಳು ಸಾಮಾನ್ಯ. ಒಳ್ಳೆಯ ಉದ್ದೇಶ ಇದ್ದರೆ ಗುರಿ ಮುಟ್ಟುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿರುವ ಜೆಡಿಎಸ್ ರಾಜ್ಯ ಕಚೇರಿ ಜೆ.ಪಿ.ಭವನದಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಗವಂತನ ಆಶೀರ್ವಾದ ಹಾಗೂ ದೇವೇಗೌಡರ ಆಶೀರ್ವಾದ ನನ್ನ ಮೇಲೆ ಇದೆ. ಮುಂದಿನ ದಿನಗಳಲ್ಲಿ ನಾನು ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದರು.

ವರ್ಷಕ್ಕೊಮ್ಮೆ ಅಲ್ಲ, ಪ್ರತಿನಿತ್ಯವೂ ಮಹಿಳೆಯರ ದಿನಾಚರಣೆಯನ್ನು ಹೃದಯದಲ್ಲಿ ಆಚರಣೆ ಮಾಡೋಣ. ನಮ್ಮ ಪಕ್ಷ ಸಂಘಟನೆಗೆ ಮಹಿಳೆಯರು ಎಷ್ಟು ತ್ಯಾಗ ಮಾಡಿದ್ದಾರೆ ಎನ್ನುವುದನ್ನು ನಾನು ಬಲ್ಲೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಎಲ್ಲರೂ ತಳಮಟ್ಟದಿಂದ ಹೋರಾಟ ನಡೆಸೋಣ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಭಾರತ ಎಲ್ಲಾ ಕ್ಷೇತ್ರಗಳಲ್ಲಿಯೂ ಮುಂದುವರೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶವು ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಅವತರಿಸುವ ದಿನಗಳು ದೂರವಿಲ್ಲ. ನರೇಂದ್ರ ಮೋದಿಯವರ ಹತ್ತು ವರ್ಷಗಳ ಆಡಳಿತವನ್ನು ಎಲ್ಲರೂ ಮೆಚ್ಚಬೇಕು. ಇಂದು ಭಾರತಕ್ಕೆ ಜಾಗತಿಕವಾಗಿ ದೊಡ್ಡ ಗೌರವ ಸಿಕ್ಕಿದೆ ಅಂದರೆ ಅದಕ್ಕೆ ಮೋದಿ ಅವರೇ ಕಾರಣ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News