×
Ad

ಕಲಬುರಗಿಯಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಪ್ರಾರಂಭ : ಸಚಿವ ಡಾ.ಶರಣಪ್ರಕಾಶ್ ಪಾಟೀಲ್

Update: 2025-03-17 21:13 IST

ಬೆಂಗಳೂರು : ಕಲಬುರಗಿ ಜಿಲ್ಲೆಯ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆಯಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಯನ್ನು ಪ್ರಾರಂಭಿಸಲು ಸರಕಾರ ಉದ್ದೇಶಿಸಿದ್ದು, 2025-26ನೇ ಸಾಲಿನ ಆಯವ್ಯಯದಲ್ಲಿ ಸಹ ಘೋಷಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಸೋಮವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮೈಸೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಗಳನ್ನು ತಲಾ 100 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮಾನವ ಸಂಪನ್ಮೂಲ ಹಾಗೂ ಸುಸಜ್ಜಿತ ಸೌಲಭ್ಯಗಳೊಂದಿಗೆ ಸ್ಥಾಪಿಸಲಾಗುವುದು ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News