×
Ad

ಏಕನಾಥ್ ಶಿಂಧೆ ಹೇಳಿಕೆಯ ಕುರಿತು ಯಾವುದೇ ಮಾಹಿತಿ ಇಲ್ಲ : ವಿಜಯೇಂದ್ರ

Update: 2024-05-13 18:58 IST

ಬೆಂಗಳೂರು : ವಿರೋಧ ಪಕ್ಷವಾಗಿ ಸಂತೋಷದಿಂದ ಇದ್ದೇವೆ. ಪ್ರತಿಪಕ್ಷ ಮಾಡಬೇಕಾದ ಕೆಲಸಗಳನ್ನು ನಾವು ಮಾಡುತ್ತಿದ್ದೇವೆ. ಯಾವ ಕಾರಣಕ್ಕೂ ರಾಜ್ಯ ಕಾಂಗ್ರೆಸ್ ಸರಕಾರವನ್ನು ಬೀಳಿಸುವ ಪ್ರಯತ್ನ ಮಾಡಲ್ಲ. ಏಕನಾಥ್ ಶಿಂಧೆ ಹೇಳಿಕೆಯ ಕುರಿತು ಯಾವುದೇ ಮಾಹಿತಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯಾವುದೇ ರೀತಿಯ ಆಪರೇಷನ್ ಮಾಡುವ ಪ್ರಶ್ನೆ ಇಲ್ಲ. ಆದರೆ ಲೋಕಸಭೆ ಚುನಾವಣಾ ಫಲಿತಾಂಶ ರಾಜ್ಯದಲ್ಲಿ ಯಾವ ರೀತಿ ಪ್ರಭಾವ ಬೇಕಾದರೂ ಬೀರಬಹುದು. ಅದರ ಪರಿಣಾಮ ಏನು ಬೇಕಾದರೂ ಆಗಬಹುದು. ಅದಕ್ಕೆ ನಾವು ಜವಾಬ್ದಾರರು ಅಲ್ಲ ಎಂದು ಹೇಳಿದರು.

ಕರ್ನಾಟಕದ ಕಾಂಗ್ರೆಸ್ ಸರಕಾರ ಪತನದ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಏನು ಹೇಳಿದ್ದಾರೆ ಎನ್ನುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ, ಲೋಕಸಭೆ ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಯಾವ ರೀತಿ ಅಲ್ಲೋಲ-ಕಲ್ಲೋಲವಾಗಲಿದೆ ಎನ್ನುವುದನ್ನು ನಾನು ಹೇಳುವುದಿಲ್ಲ ಎಂದು ಅವರು ಪ್ರತಿಕ್ರಿಯೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News