×
Ad

ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳ : ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್

Update: 2025-10-18 15:30 IST

ಡಾ.ಶರಣಪ್ರಕಾಶ್‌ ಪಾಟೀಲ್

ಬೆಂಗಳೂರು : 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳವಾಗಿದ್ದು, ಹಲವಾರು ವರ್ಷಗಳ ಬೇಡಿಕೆ ಈಗ ಈಡೇರಿದಂತಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ್‌ ಪಾಟೀಲ್ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಶನಿವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಈ ಕುರಿತು ಸಂಪೂರ್ಣ ಮಾಹಿತಿ ನೀಡಿದರು.

ಉತ್ತಮ ಗುಣಮಟ್ಟದ ಉನ್ನತ ಶಿಕ್ಷಣ ನೀಡುವುದೇ ನಮ್ಮ ಸರ್ಕಾರದ ಗುರಿ ಎಂದು ತಿಳಿಸಿದರು.

ಪ್ರೀ ಕ್ಲೀನಿಕಲ್‌, ಪ್ಯಾರಾ ಕ್ಲೀನಿಕಲ್‌ ಮತ್ತು ಕ್ಲೀನಿಕಲ್‌ ವಿಭಾಗಕ್ಕೆ ಒಟ್ಟು 422 ಪಿಜಿ ಸೀಟುಗಳ ಹೆಚ್ಚಳ ಮಾಡಲಾಗಿದೆ. ಪೀಡಿಯಾಟ್ರಿಕ್ಸ್‌, ಅನಸ್ತೇಸಿಯಾ, ಫೋರೆನ್ಸಿಕ್‌ ಮೆಡಿಸಿನ್‌, ಮೈಕ್ರೊ ಬಯಲಾಜಿ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ವಿಭಾಗದಲ್ಲಿ ಪಿಜಿ ಸೀಟುಗಳನ್ನು ಮಂಜೂರು ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

572 ಸೀಟು ಹೆಚ್ಚಳಕ್ಕೆ ಮನವಿ ಸಲ್ಲಿಸಲಾಗಿತ್ತು :

ಪ್ರತಿಬಾರಿಯಂತೆ ಈ ಬಾರಿಯೂ ಪಿಜಿ ಕೋರ್ಸ್ ಗೆ ಬೇಡಿಕೆ ಇತ್ತು. ಪಿಜಿಯಲ್ಲಿ 572 ಸೀಟುಗಳನ್ನು ಮಂಜೂರು ಮಾಡಲು ನಾವು ಮನವಿ ಮಾಡಿದ್ದೆವು. ಇದರಲ್ಲಿ ನಮಗೆ 422 ಸೀಟು ಲಭ್ಯವಾಗಿವೆ. ಕಳೆದ ವರ್ಷ 1,694 ಪಿಜಿ ಸೀಟು ಇದ್ದರೆ, ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ 422 ಸೀಟು ಹೆಚ್ಚಳ ಆಗಲಿದೆ. ಈ ವರ್ಷ ಒಟ್ಟು 2,116 ಸೀಟು ವಿದ್ಯಾರ್ಥಿಗಳಿಗೆ ಸಿಗಲಿದೆ. ಇದು ವಿದ್ಯಾರ್ಥಿಗಳಿಗೆ ದೀಪಾವಳಿ ಕೊಡುಗೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದರು.

ಈಗಾಗಲೇ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‍ಎಂಸಿ) ಆದೇಶ ನೀಡಿದೆ. ಇದರ ಜೊತೆಗೆ ಇದೇ ಮೊದಲ ಬಾರಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯರಿಗೆ ಶೇ.15ರಷ್ಟು ಕೋಟಾ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News