×
Ad

ಜೂನ್ 24ರಂದು ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

Update: 2024-06-19 11:07 IST

ಬೆಂಗಳೂರು, ಜೂ.19: ಶಿಕ್ಷಕರ ಕ್ಷೇತ್ರದಿಂದ ಹಾಗೂ ಪದವೀಧರರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನೂತನವಾಗಿ ಚುನಾಯಿತರಾಗಿರುವ ಒಟ್ಟು 17 ಮಂದಿ ಶಾಸಕರು ಜೂ.24ರಂದು ಪೂರ್ವಾಹ್ನ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನೂತನವಾಗಿ ಚುನಾಯಿತರಾದ ಶಾಸಕರುಗಳಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ವಿಧಾನ ಪರಿಷತ್ ಸಚಿವಾಲಯದ ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News