×
Ad

ಬೆಂಗಳೂರು | ಆನ್‍ಲೈನ್ ಗೇಮಿಂಗ್ ಗೀಳಿಗೆ ಇಬ್ಬರು ಬಲಿ

Update: 2025-01-12 20:12 IST

ಸಾಂದರ್ಭಿಕ ಚಿತ್ರ(Meta AI)

ಬೆಂಗಳೂರು: ಆನ್‍ಲೈನ್ ಗೇಮಿಂಗ್ ಗೀಳಿಗೆ ಬಿದ್ದು ಒಂದೇ ದಿನ ಇಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರತ್ಯೇಕ ಪ್ರಕರಣಗಳು ಬೆಂಗಳೂರಿನಲ್ಲಿ ವರದಿಯಾಗಿವೆ.

ಇಲ್ಲಿನ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಲ್ಲಿಕಾರ್ಜುನ (25) ಹಾಗೂ ಮತ್ತೊಂದೆಡೆ ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಟೊ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಿಜಯನಗರ ಮೂಲದ ಮಲ್ಲಿಕಾರ್ಜುನ ಖಾಸಗಿ ಆಸ್ಪತ್ರೆಯೊಂದಲ್ಲಿ ವೈದ್ಯಕೀಯ ಸಹಾಯಕನಾಗಿ ಕೆಲಸ ಮಾಡಿಕೊಂಡಿದ್ದು, ನಾಲ್ಕು ವರ್ಷಗಳಿಂದ ಆನ್‍ಲೈನ್ ಗೇಮ್ಸ್ ಆಟದ ಚಟ ಹೊಂದಿದ್ದ ಎನ್ನಲಾಗಿದೆ. ಗೇಮಿಂಗ್ ಆ್ಯಪ್‍ನಲ್ಲಿ ಹಣ ಕಳೆದುಕೊಂಡು ಆರ್ಥಿಕ ಸಂಕಷ್ಟ ತಾಳಲಾರದೆ ಶನಿವಾರ ತನ್ನ ಪಿಜಿಯಲ್ಲಿ ಆತ್ಮಹತ್ಯೆಗೆ ಶರಣಾಗಿರುವುದು ಗೊತ್ತಾಗಿದೆ.

ಮತ್ತೊಂದು ಪ್ರಕರಣದಲ್ಲಿ ಆನ್‍ಲೈನ್‍ನಲ್ಲಿ ಗೇಮ್ಸ್‌ ನಲ್ಲಿ ಹಣ ಹೂಡಿ ಆರ್ಥಿಕ ಸಂಕಷ್ಟ ತಾಳಲಾರದೆ ಆಟೊ ಚಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಳ್ಳಾರಿ ಮೂಲದ ವ್ಯಕ್ತಿ, ಕುಟುಂಬಸ್ಥರು ಮನೆಯಲ್ಲಿ ಇಲ್ಲದಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News