ವಿಪಕ್ಷ ನಾಯಕ ಆರ್.ಅಶೋಕ್ ಬೆಂಗಾವಲು ವಾಹನದ ಚಾಲಕ ಆತ್ಮಹತ್ಯೆ
ಬೆಂಗಳೂರು: ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ ಅವರ ಪೊಲೀಸ್ ಬೆಂಗಾವಲು ವಾಹನದ ಚಾಲಕ ಶರಣಪ್ಪ (33) ಎಂಬವರು ಬುಧವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಬಾಪೂಜಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಶರಣಪ್ಪ ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಶರಣಪ್ಪ ಅವರು ಮಾಗಡಿ ರಸ್ತೆ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೆಬಲ್ ಆಗಿರುವ ಪತ್ನಿ ಶೈಲಶ್ರೀ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮೂಲತಃ ‘ಕಲಬುರಗಿ ಜಿಲ್ಲೆಯವರಾಗಿರುವ ಶರಣಪ್ಪ ಕಳೆದ ಎರಡೂವರೆ ವರ್ಷಗಳಿಂದ ಅಶೋಕ ಅವರ ಬೆಂಗಾವಲು ವಾಹನ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಕೌಟುಂಬಿಕ ಕಲಹದ ಕಾರಣಕ್ಕೆ ಶರಣಪ್ಪ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಬಗ್ಗೆ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.