×
Ad

ಕರ್ನಾಟಕದ ಕಲ್ಯಾಣಕ್ಕಾಗಿ ನಮ್ಮ 'ಕೈ' ಹೀಗೆ ಜೊತೆಯಾಗಿರಲಿದೆ: ಸಿದ್ದರಾಮಯ್ಯರಿಗೆ ಜನ್ಮದಿನದ ಶುಭಾಶಯ ಕೋರಿದ ಡಿಕೆಶಿ

Update: 2025-08-03 12:17 IST

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು(ಆಗಸ್ಟ್ 3) 77ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಭಾಶಯಗಳನ್ನು ಕೋರಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಹಾಕಿರುವ ಡಿಕೆಶಿ, ಕನ್ನಡಿಗರ ಹಿತವನ್ನು ಕಾಪಾಡಲು, ಕರ್ನಾಟಕದ ಕಲ್ಯಾಣಕ್ಕಾಗಿ ನಮ್ಮ 'ಕೈ' ಹೀಗೆ ಜೊತೆಯಾಗಿರಲಿದೆ. ದೇವರು ತಮಗೆ ಉತ್ತಮ ಆಯುರಾರೋಗ್ಯ ನೀಡಿ ಕಾಪಾಡಲಿ ಎಂದು ಶುಭ ಹಾರೈಸಿದ್ದಾರೆ.

"ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಶುಭಾಶಯಗಳು. ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಿಂದುಳಿದ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸುವ ಮೂಲಕ ಉತ್ತಮ ಆಡಳಿತಕ್ಕೆ ಹೆಸರುವಾಸಿಯಾಗಿದ್ದೀರಿ. ಕನ್ನಡಿಗರ ಹಿತವನ್ನು ಕಾಪಾಡಲು, ಕರ್ನಾಟಕದ ಕಲ್ಯಾಣಕ್ಕಾಗಿ ನಮ್ಮ 'ಕೈ' ಹೀಗೆ ಜೊತೆಯಾಗಿರಲಿದೆ. ದೇವರು ತಮಗೆ ಉತ್ತಮ ಆಯುರಾರೋಗ್ಯ ನೀಡಿ ಕಾಪಾಡಲಿ ಎಂದು ಶುಭ ಹಾರೈಸುತ್ತೇನೆ'' ಎಂದಿದ್ದಾರೆ.

ಬದ್ಧತೆಯ ನಾಯಕ: ‘ದಿಟ್ಟ ನಿಲುವು, ತತ್ವದ ಬದ್ಧತೆ ಮತ್ತು ಸಾಮಾಜಿಕ ನ್ಯಾಯದ ಪರವಾಗಿ ನಿಲ್ಲುವ ಸಮಾಜವಾದಿ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ, ಶೋಷಿತ ವರ್ಗಗಳ ಸ್ವಾಭಿಮಾನಕ್ಕೆ ಸ್ಪಷ್ಟ ನಿಲುವು ಮತ್ತು ರಾಜ್ಯದ ಪ್ರಗತಿಗೆ ಮುಂದಾದ ಅವರ ಪ್ರಾಮಾಣಿಕ ಸೇವೆ ಸದಾ ಶ್ಲಾಘನೀಯ. ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಸಿಗಲಿ. ಪಕ್ಷಕ್ಕೂ ರಾಜ್ಯಕ್ಕೂ ಅವರ ಅಮೂಲ್ಯ ಸೇವೆ ಮುಂದುವರಿಯಲಿ’

ಸತೀಶ್ ಜಾರಕಿಹೊಳಿ, ಲೋಕೋಪಯೋಗಿ ಸಚಿವ 

ಸಾಮಾಜಿಕ ನ್ಯಾಯದ ಪ್ರತಿಪಾದಕ: ‘ಸಾಮಾಜಿಕ ನ್ಯಾಯದ ಪ್ರಬಲ ಪ್ರತಿಪಾದಕರಾಗಿ, ಬಡಜನರ, ಹಿಂದುಳಿದ, ದೀನ ದಲಿತರ ಸರ್ವಾಂಗೀಣ ಕಲ್ಯಾಣಕ್ಕಾಗಿ ಶ್ರಮಿಸುವ ಬದ್ದತೆ ಇರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜನ್ಮ ದಿನದ ಶುಭಾಶಯಗಳು. ಸಾಂವಿಧಾನಿಕ ಮೌಲ್ಯಗಳ ಮೇಲೆ ಅಚಲವಾದ ನಂಬಿಕೆ ಹಾಗೂ ವೈಚಾರಿಕ ಸ್ಪಷ್ಟತೆಯೊಂದಿಗೆ ರಾಜ್ಯವನ್ನು ಮುನ್ನಡೆಸುತ್ತಿರುವ ಅವರಿಗೆ ಮತ್ತಷ್ಟು ಆರೋಗ್ಯ, ಉತ್ಸಾಹ, ಶಕ್ತಿ ಸಿಗಲಿ’ 

 ಬಿ.ಕೆ.ಹರಿಪ್ರಸಾದ್, ವಿಧಾನ ಪರಿಷತ್ ಸದಸ್ಯ

‘ಬಡವರ, ಹಿಂದುಳಿದವರ ಹಾಗೂ ರೈತರ ಹಿತಚಿಂತಕರಾಗಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ದಿಟ್ಟ ನಾಯಕತ್ವ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಆರ್ಥಿಕ ತಜ್ಞರಾಗಿ ಬಜೆಟ್ ಮಂಡನೆಯಲ್ಲಿ ದಾಖಲೆ ಬರೆದ, ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ, ನುಡಿದಂತೆ ನಡೆಯುತ್ತಿರುವ ಧೀಮಂತ ನಾಯಕರಾಗಿರುವ ತಮಗೆ ಭಗವಂತ ದೀರ್ಘಾಯುಷ್ಯ, ಉತ್ತಮ ಆರೋಗ್ಯ ಕರುಣಿಸಲಿ’

-ಲಕ್ಷ್ಮಿ ಹೆಬ್ಬಾಳ್ಕರ್, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News