Photo credit: PTI

ಬೆಂಗಳೂರು: ನಾಲ್ಕು ವರ್ಷಗಳ ಹಿಂದೆ ಮಂಡ್ಯದಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆಯೊಂದರಲ್ಲಿ 'ಪಾಕಿಸ್ತಾನ್ ಝಿಂದಾಬಾದ್' ಘೋಷಣೆ ಕೂಗಿದ ಆರೋಪಿ. ಮಂಡ್ಯ ಮೂಲದ ವ್ಯಕ್ತಿಯ ಮೇಲಿನ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದು ಗೊಳಿಸಿದೆ.

ಮಂಡ್ಯ ಮೂಲದ ಡಿಎಸ್.ರವಿಕುಮಾರ್ ಎಂಬವರು ತನ್ನ ಮೇಲಿನ ಕ್ರಿಮಿಲ್ ಪ್ರಕರಣದ ರದ್ದತಿ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀಶಾನಂದರಿದ್ದ ಪೀಠ ಈ ಆದೇಶ ನೀಡಿದೆ.

ಏನಿದು ಪ್ರಕರಣ..?

ವಿಶ್ವಸಂಸ್ಥೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತದ ವಿರುದ್ಧ ಪಾಕಿಸ್ತಾನದ ವಿದೇಶಾಂಗ ಸಚಿವ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ 2022ರ ಡಿಸೆಂಬರ್ 18ರಂದು ಮಂಡ್ಯದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ಆಯೋಜಿಸಲಾಗಿತ್ತು. ಈ ಪ್ರತಿಭಟನೆಯಲ್ಲಿ ರವಿಕುಮಾರ್ 'ಪಾಕಿಸ್ತಾನ್ ಝಿಂದಾಬಾದ್' ಎಂದು ಘೋಷಣೆ ಕೂಗಿರುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಅವರ ವಿರುದ್ಧ ಮಂಡ್ಯ ಪೊಲೀಸರು ಕ್ರಿಮಿನಲ್ ಪ್ರಕರಣ ಕೂಡಾ ದಾಖಲಿಸಿದ್ದರು.

ತಾನು ಬಾಯ್ತಪ್ಪಿನಿಂದ 'ಪಾಕಿಸ್ತಾನ್ ಝಿಂದಾಬಾದ್' ಕೂಗಿದ್ದು, ತನ್ನ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದು ಮಾಡಬೇಕು ಎಂದು ರವಿಕುಮಾರ್ ನ್ಯಾಯಾಲಯದ ಮೊರೆ ಹೋಗಿದ್ದರು.

ನ್ಯಾಯಪೀಠದ ಅಭಿಪ್ರಾಯ ಏನು..?

ಅರ್ಜಿದಾರರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ತನಿಖಾ ದಾಖಲೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ಬಾಯ್ತಪ್ಪಿನಿಂದ ಕೂಗಿದ ಮಾತ್ರಕ್ಕೆ ಅಪರಾಧ ಆಗಲಾರದು. ಅಲ್ಲದೆ ಅರ್ಜಿದಾರರಿಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಆಗಲಿ, ಸಮಾಜದಲ್ಲಿ ಅಶಾಂತಿ ಮೂಡಿಸುವ ಉದ್ದೇಶವಾಗಲಿ ಇಲ್ಲದೆ ಇರುವುದುರಿಂದ ಪ್ರಕರಣವನ್ನ ರದ್ದು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor