×
Ad

ನಾಸಿರ್ ಹುಸೇನ್ ಬೆಂಬಲಿಗರಿಂದ ʼಪಾಕಿಸ್ತಾನ್ ಝಿಂದಾಬಾದ್ʼ ಘೋಷಣೆ ಕೂಗಿದ ಆರೋಪ: ಬಿಜೆಪಿ ಶಾಸಕನಿಂದ ದೂರು

Update: 2024-02-27 23:28 IST

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಾಸಿರ್ ಹುಸೇನ್ ಅವರ ಬೆಂಬಲಿಗರು ʼಪಾಕಿಸ್ತಾನ್ ಝಿಂದಾಬಾದ್ʼ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ್ ಅವರು ನಗರದ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್‌ನ ನಾಸಿರ್ ಹುಸೇನ್ ಅವರು ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಹೇಳಿಕೆ ಕೊಡುತ್ತಿದ್ದ ಸಂದರ್ಭದಲ್ಲಿ ಅವರ ಬೆಂಬಲಿಗರು ʼಪಾಕಿಸ್ತಾನ್ ಝಿಂದಾಬಾದ್ʼ  ಎಂದು ಘೋಷಣೆ ಕೂಗಿದ್ದಾರೆ. ಈ ರೀತಿಯ ದೇಶದ್ರೋಹ ಘೋಷಣೆಗಳನ್ನು ಕಾಂಗ್ರೆಸ್ ಪಕ್ಷದ ಬೆಂಬಲಿಗರು ಕೂಗಿರುವುದು ಅಕ್ಷಮ್ಯ ಅಪರಾಧವಾಗಿದೆ. ಕೂಡಲೇ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News