×
Ad

ಮುಡಾ ಹಗರಣ ಸಿಬಿಐ ತನಿಖೆ ಕೋರಿದ್ದ ಅರ್ಜಿ : ವಾದ ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Update: 2025-01-27 17:06 IST

ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣ ಸಿಬಿಐ ತನಿಖೆಗೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ದೂರುದಾರ ಸ್ನೇಹಮಯಿ ಕೃಷ್ಣ ಅವರು, ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಲೋಕಾಯುಕ್ತ ಪೊಲೀಸರ ಅಂತಿಮ ವರದಿ ಸಲ್ಲಿಕೆಗೆ ಗಡುವು ವಿಸ್ತರಣೆ ಮಾಡಿದ್ದು, ಆದೇಶ ಪ್ರಕಟಿಸುವವರೆಗೂ ಗಡುವು ವಿಸ್ತರಿಸಿದೆ.

ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ಮಣೀಂದರ್ ಸಿಂಗ್ ವಾದ ಮಂಡನೆ ಮಾಡಿದ್ದರೆ, ಸಿಎಂ ಸಿದ್ದರಾಮಯ್ಯ ಪರ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದರು. ಈ ವಾದ ಪ್ರತಿವಾದ ಆಲಿಸಿದ ಕೋರ್ಟ್, ಆದೇಶವನ್ನು ಕಾಯ್ದಿರಿಸಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ವರದಿ ಸಲ್ಲಿಕೆ ಅವಧಿ ಗಡುವು ಸಹ ವಿಸ್ತರಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News