ಬೆಂಗಳೂರು : ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂ.ಆರ್ಕ್ ಕೋರ್ಸ್‍ಗಳ ಪ್ರವೇಶಕ್ಕೆ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳಿಗೆ ಎಲ್ಲ ನಾಲ್ಕು ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟನೆ ಹೊರಡಿಸಿರುವ ಅವರು, ಪಿಜಿಸಿಇಟಿ ಅಭ್ಯರ್ಥಿಗಳು ಮೊದಲ ಸುತ್ತಿನಲ್ಲಿ ಸೀಟು ಪಡೆದವರಿಗೆ 4 ಆಯ್ಕೆಗಳನ್ನು ದಾಖಲಿಸಲು ಅ.13ರ ಬೆಳಗ್ಗೆ 10ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಈಗಾಗಲೇ ಕಾಲೇಜು ಪ್ರವೇಶ ಪಡೆದವರಿಗೂ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪಿಜಿಸಿಇಟಿಗೆ ಇನ್ನೂ ಎರಡು ಸುತ್ತಿನ ಕೌನ್ಸೆಲಿಂಗ್ ನಡೆಸಲು ಅವಕಾಶ ನೀಡಬೇಕೆಂದು ಹಾಗೂ ಯುಜಿ ಮತ್ತು ಪಿಜಿ ಕೋರ್ಸ್‍ಗಳ ಪ್ರವೇಶಕ್ಕೆ ಪ್ರತ್ಯೇಕ ವೇಳಾಪಟ್ಟಿ ನೀಡಲು ಎಐಸಿಟಿಎಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿ ಎಂದು ಸುಪ್ರೀಂಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಮುಂದಿನ ತೀರ್ಮಾನದವರೆಗೆ ನಾಲ್ಕು ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ ಎಂದು ಕೆಇಎ ಮಾಹಿತಿ ನೀಡಿದೆ.

ಆಯ್ಕೆ-1 ದಾಖಲಿಸಿದರೆ ಕಾಲೇಜಿಗೆ ಪ್ರವೇಶ ಪಡೆಯಬೇಕು. ಆಯ್ಕೆ-2 ದಾಖಲಿಸಿದರೆ ಇನ್ನೂ ಉತ್ತಮ ಸೀಟಿಗೆ ಅಪ್ ಗ್ರೇಡ್ ಆಗಲು ಅನುವು ಮಾಡುತ್ತದೆ. ಆಯ್ಕೆ-3 ಹಾಕಿದರೆ ಸಿಕ್ಕಿರುವ ಸೀಟು ಬೇಡ ಎಂದು ಹಾಗೂ ಆಯ್ಕೆ-4 ಹಾಕಿದರೆ ಯಾವುದೂ ಬೇಡ ಎಂದು ಇಡೀ ಕೌನ್ಸೆಲಿಂಗ್ ಪ್ರಕ್ರಿಯೆಯಿಂದ ಹೊರ ಹೋಗಲು ಅವಕಾಶ ನೀಡುತ್ತದೆ ಎಂದು ಕೆಇಎ ವಿವರಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor