×
Ad

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಕೋರಿ ಹೈಕೋರ್ಟ್‍ಗೆ ಪಿಐಎಲ್

Update: 2023-12-26 23:20 IST

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಪ್ರದೇಶಗಳಲ್ಲಿ ಹೊಸ ವರ್ಷಾಚರಣೆ ನಿರ್ಬಂಧ ಕೋರಿ ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಕೊರೋನ ಸೋಂಕು ತಡೆಗಟ್ಟಲು ಹೊಸ ವರ್ಷಾಚರಣೆ ನಿರ್ಬಂಧಿಸಬೇಕು ಎಂದು ವಕೀಲ ಎನ್.ಪಿ.ಅಮೃತೇಶ್ ಮನವಿ ಮಾಡಿದ್ದಾರೆ. ರಾಜ್ಯದಲ್ಲಿಯೂ ಕೊರೋನ ಹರಡುವ ಭೀತಿ ಎದುರಾಗಿದೆ. ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ ನೀಡಿದೆ.

ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಕಮರ್ಷಿಯಲ್ ಸ್ಟ್ರೀಟ್‍ಗಳಲ್ಲಿ ಸಾವಿರಾರು ಜನ ಸೇರುತ್ತಾರೆ. ಈ ಪ್ರದೇಶಗಳಲ್ಲಿ ಹೊಸ ವರ್ಷಾಚರಣೆ ನಿರ್ಬಂಧ ಮನವಿ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News