×
Ad

ಪೋಕ್ಸೊ ಪ್ರಕರಣ | ಜುಲೈ 15ರಂದು ಕೋರ್ಟ್‌ಗೆ ಹಾಜರಾಗುವಂತೆ ​​​ಬಿಎಸ್‌ವೈಗೆ ಸಮನ್ಸ್ ಜಾರಿ

Update: 2024-07-04 22:42 IST

ಯಡಿಯೂರಪ್ಪ | PTI 

ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ.

ಮಾಜಿ ಸಿಎಂ ಬಿಎಸ್‌ವೈ ವಿರುದ್ಧದ ಪೊಕ್ಸೊ ಪ್ರಕರಣವನ್ನು ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಪೊಲೀಸರು ಸಲ್ಲಿಸಿದ್ದ ಆರೋಪಪಟ್ಟಿಯನ್ನು ವಿಚಾರಣೆಗೆ ಪರಿಗಣಿಸಿದೆ.

ಅಲ್ಲದೆ, ಜುಲೈ 15 ರಂದು ಖುದ್ದಾಗಿ ಹಾಜರಾಗುವಂತೆ ಬಿ.ಎಸ್.ಯಡಿಯೂರಪ್ಪಗೆ ಸಮನ್ಸ್ ಜಾರಿಗೊಳಿಸಿದೆ. ಬಿ.ಎಸ್. ಯಡಿಯೂರಪ್ಪ ಹಾಗೂ ಇತರೆ ಆರೋಪಿಗಳಿಗೆ ಸಮನ್ಸ್ ಜಾರಿಗೆ ಆದೇಶಿಸಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತಯ ತಾಯಿ ದೂರು ದಾಖಲಿಸಿದ್ದರು. ಸರಕಾರ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News