×
Ad

ಬೆಂಗಳೂರು: ಪೊಲೀಸರ ಸೋಗಿನಲ್ಲಿ ವಂಚನೆ; ಆರೋಪಿಗಳ ಬಂಧನ

Update: 2023-12-01 22:48 IST

Photo: freepik

ಬೆಂಗಳೂರು: ವ್ಯಕ್ತಿಯೊಬ್ಬರಿಗೆ ನೀವು ಕಳುಹಿಸಿರುವ ಕೊರಿಯರ್ ಪಾರ್ಸೆಲ್‍ನಲ್ಲಿ ಮಾದಕ ವಸ್ತುವಿದೆ ಎಂದು ಮುಂಬೈ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಬೆದರಿಸಿ, ಹಂತ-ಹಂತವಾಗಿ ಹಣ ಪಡೆದು ವಂಚನೆ ಮಾಡಿದ್ದ ಆರೋಪದಡಿ 8 ಮಂದಿಯನ್ನು ಉತ್ತರ ವಿಭಾಗದ ಸೈಬರ್ ಕ್ರೈಂ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮಲ್ಲೇಶ್ವರದ ನಟರಾಜ್ ಬಿ.ಎಸ್.ರಾವ್ ಎಂಬುವರು ನೀಡಿದ ದೂರಿನ ಮೇರೆಗೆ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಇನ್ಸ್ ಪೆಕ್ಟರ್ ಎಸ್.ಶಿವರತ್ನ ನೇತೃತ್ವದ ತಂಡವು ಆರೋಪಿಗಳನ್ನು ಬಂಧಿಸಿ, 13 ಲಕ್ಷ ಹಣ ವಶಪಡಿಸಿಕೊಂಡು ವಿವಿಧ ಬ್ಯಾಂಕ್ ಖಾತೆಯಲ್ಲಿದ್ದ 19 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ.

ಕೃತ್ಯಕ್ಕೆ ಬಳಸಿದ್ದ 11 ಮೊಬೈಲ್‍ ಫೋನ್, 148 ಬೇನಾಮಿ ಬ್ಯಾಂಕ್ ಖಾತೆಗಳನ್ನ ಜಪ್ತಿ ಮಾಡಲಾಗಿದೆ. ಜೊತೆಗೆ 4500 ಯುಎಸ್ ಡಾಲರ್ ವಶಕ್ಕೆ ಪಡೆದುಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News