ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿ ಮತ್ತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ನಡುವೆ ನಿನ್ನೆ ಹುಬ್ಬಳ್ಳಿಯಲ್ಲಿ ನಡೆದ ಮಾತುಕತೆ ಅತ್ಯಂತ ಸಮಾಧಾನಕರವಾಗಿ ನಡೆದಿರುವುದು ಅಭಿನಂದನಾರ್ಹ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಸಭೆಯ ಮೂಲಕ ರೈತರು ತಮ್ಮ ಬೇಡಿಕೆಗಳನ್ನು ಶಾಂತಿಯುತವಾಗಿ ಹಾಗೂ ಕಾನೂನುಬದ್ಧವಾಗಿ ಮಂಡಿಸುವವರು ಎಂಬುದು ಸಾಬೀತಾಗಿದೆ ಎಂದು ತಿಳಿಸಿದ್ದಾರೆ.

ರೈತರ ಬೇಡಿಕೆಗಳಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೂ, ಸಭೆಯಲ್ಲಿ ಉಪಸ್ಥಿತರಿದ್ದ ಇತರ ಎಲ್ಲ ಜನಪ್ರತಿನಿಧಿಗಳು ಹಾಗೂ ನಾಯಕರಿಗೂ ಅಭಿನಂದನೆ ಸಲ್ಲಿಸುತ್ತೇನೆ. ರೈತ ಸಮುದಾಯ ಮತ್ತು ರೈತ ನಾಯಕರಿಗೆ ಮತ್ತೊಮ್ಮೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ಮುಂಬರುವ ದಿನಗಳಲ್ಲಿ ರೈತರ ಸಮಸ್ಯೆಗಳು ಆದಷ್ಟು ಬೇಗ ಸಂಪೂರ್ಣವಾಗಿ ಬಗೆಹರಿಯಲಿ ಎಂದು ದಸರಾ ಹಬ್ಬದ ಸಂದರ್ಭದಲ್ಲಿ ಜಗನ್ಮಾತೆಯಲ್ಲಿ ಪ್ರಾರ್ಥಿಸುವುದಾಗಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor