×
Ad

ಧರ್ಮಸ್ಥಳ ಪ್ರಕರಣದಲ್ಲಿ ಕಾಂಗ್ರೆಸ್ ಸರಕಾರ ಏಕೆ ಮೌನವಹಿಸಿದೆ? : ಪ್ರಹ್ಲಾದ್ ಜೋಶಿ

Update: 2025-08-24 22:27 IST

ಬೆಂಗಳೂರು, ಆ. 24: ‘ಧರ್ಮಸ್ಥಳ ಪ್ರಕರಣದ ನೆಪದಲ್ಲಿ ಧಾರ್ಮಿಕ ಕೇಂದ್ರಗಳ ಅಪಪ್ರಚಾರದ ಹಿಂದಿನ ಕಾಣದ ಕೈಗಳಿಂದ ಉದ್ದೇಶಪೂರ್ವಕ ಪ್ರಯತ್ನ ನಡೆದಿದೆಯಾ? ಇದು ಯಾರ ಆಜ್ಞೆಯ ಮೇರೆಗೆ ಇಂತಹ ದುಸ್ಸಾಹಸಕ್ಕೆ ಕೈಹಾಕಲಾಯಿತು?’ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇಂದಿಲ್ಲಿ ಪ್ರಶ್ನಿಸಿದ್ದಾರೆ.

ರವಿವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ಧರ್ಮಸ್ಥಳ ಪ್ರಕರಣದ ಸತ್ಯಾಸತ್ಯಗಳು ಇದ್ದರೂ, ಕಾಂಗ್ರೆಸ್ ಸರಕಾರ ಏಕೆ ಮೌನವಹಿಸಿದೆ?. ಇದರ ಹಿಂದಿನ ಷಡ್ಯಂತ್ರದ ರೂವಾರಿ ಹಾಗೂ ಹಣಕಾಸಿನ ವ್ಯವಹಾರದ ಮೂಲಕ್ಕೆ ತಕ್ಕ ಶಾಸ್ತಿ ಯಾವಾಗ?. ನಿಷ್ಪಕ್ಷಪಾತವಾದ ತನಿಖೆ ನಡೆಸಬೇಕು ಮತ್ತು ಹೊಣೆಗಾರಿಕೆಯನ್ನು ಹೊರಬೇಕು’ ಎಂದು ಆಗ್ರಹಿಸಿದ್ದಾರೆ.

‘ಹಿಂದೂ ಧಾರ್ಮಿಕ ನಂಬಿಕೆಯ ಮೇಲೆ ನಡೆದ ಪ್ರಾಯೋಜಿತ ದಾಳಿ ಈ ಧರ್ಮಸ್ಥಳ ಪ್ರಕರಣ ಎಂಬುದು ಈಗ ಬಹಿರಂಗಗೊಂಡಿದೆ. ಕಾಂಗ್ರೆಸ್ ಸರಕಾರ ಹಿಂದೂ ಧಾರ್ಮಿಕತೆಯ ಮೇಲೆ ದಾಳಿ ನಡೆಸಿ, ಪುರಾತನವಾದ, ಪ್ರಸಿದ್ಧ ಹಿಂದೂ ದೇವಾಲಯದ ವಿರುದ್ಧ ಇಲ್ಲ-ಸಲ್ಲದ ಷಡ್ಯಂತ್ರದ ಟೂಲ್‍ಕಿಟ್ ಬಳಸಿಕೊಂಡಿತು’ ಎಂದು ಅವರು ದೂರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News