ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸರಕಾರಕ್ಕೆ ನೋಟಿಸ್
ಪ್ರಜ್ವಲ್ ರೇವಣ್ಣ
ಬೆಂಗಳೂರು: ಮನೆ ಕೆಲಸದಾಕೆಯನ್ನು ಅತ್ಯಾಚಾರಗೈದ ಆರೋಪ ಪ್ರಕರಣದಲ್ಲಿ ಹೈಕೋರ್ಟ್ ಆದೇಶದಂತೆ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಸಿರುವ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಸರಕಾರಿ ವಕೀಲರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.
ಇದಕ್ಕೆ ಮುನ್ನ ಕೆಲವೊಂದು ಸರ್ಟಿಫೈ ದಾಖಲೆಗಳನ್ನು ಸಲ್ಲಿಸಲು ನ್ಯಾಯಾಲಯ ಆಕ್ಷೇಪಣೆ ಎತ್ತಿದೆ. ಇದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಮುಂದಿನ ವಿಚಾರಣೆ ವೇಳೆ ದಾಖಲೆಗಳನ್ನು ಸಲ್ಲಿಸುವುದಾಗಿ ಪ್ರಜ್ವಲ್ ಪರ ವಕೀಲರು ಮಾಹಿತಿ ನೀಡಿದ್ದಾರೆ. ಹೀಗಾಗಿ ಜಾಮೀನು ಅರ್ಜಿ ವಿಚಾರಣೆಯನ್ನು ವಿಶೇಷ ನ್ಯಾಯಾಲಯ ಜು.18ಕ್ಕೆಮುಂದೂಡಿದೆ.
ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಅಧೀನ ನ್ಯಾಯಾಲಯದಲ್ಲಿ ಸಲ್ಲಿಸುವಂತೆ ಪ್ರಜ್ವಲ್ ಗೆ ಸೂಚನೆ ನೀಡಿತ್ತು. ಅಲ್ಲದೆ ಆ ಜಾಮೀನು ಅರ್ಜಿಯನ್ನು 10 ದಿನ ಒಳಗೆ ಇತ್ಯರ್ಥಪಡಿಸುವಂತೆ ಹೈಕೋರ್ಟ್ ವಿಶೇಷ ಕೋರ್ಟ್ ಗೆ ನಿರ್ದೇಶನ ನೀಡಿತ್ತು. ಹೀಗಾಗಿ ಪ್ರಜ್ವಲ್ ರೇವಣ್ಣ ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಮಾಡಿದ ಆರೋಪ ಪ್ರಕರಣದಲ್ಲಿ ಈಗ ಮತ್ತೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.