ವಿಧಾನಸಭೆಯಲ್ಲಿ ಐದು ವಿಧೇಯಕಗಳ ಮಂಡನೆ
Update: 2025-03-04 21:31 IST
ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲ ವಸೂಲಾತಿ ಪ್ರಕ್ರಿಯೆಯಲ್ಲಿ ಅಮಾನವೀಯವಾಗಿ ವರ್ತಿಸುವುದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ರಾಜ್ಯ ಸರಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ಪೂರಕವಾಗಿ ಮೂರು ಪ್ರತ್ಯೇಕ ವಿಧೇಯಕಗಳು ಸೇರಿದಂತೆ ಐದು ವಿಧೇಯಕಗಳನ್ನು ಮಂಗಳವಾರ ವಿಧಾನಸಭೆಯಲ್ಲಿ ಮಂಡನೆ ಮಾಡಿದೆ.
2025ನೇ ಸಾಲಿನ ಕರ್ನಾಟಕ ಲೇವಾದೇವಿದಾರರ(ತಿದ್ದುಪಡಿ) ವಿಧೇಯಕ, ಕರ್ನಾಟಕ ಗಿರವಿದಾರರ(ತಿದ್ದುಪಡಿ) ವಿಧೇಯಕ, ಕರ್ನಾಟಕ ಮಿತಿ ಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ(ತಿದ್ದುಪಡಿ) ವಿಧೇಯಕ ಹಾಗೂ ಬೆಂಗಳೂರು ಅರಮನೆ(ಭೂ ಬಳಕೆ ಮತ್ತು ನಿಯಂತ್ರಣ) ವಿಧೇಯಕ ಮತ್ತು ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ(ನಿಯಂತ್ರಣ ಮತ್ತು ಅಭಿವೃದ್ಧಿ)(ತಿದ್ದುಪಡಿ) ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.