ನಾಳೆ ಮೈಸೂರಿನಲ್ಲಿ ‘ವಿವೇಕ ಸ್ಮಾರಕ’ ಉದ್ಘಾಟಿಸಲಿರುವ ಪ್ರಧಾನಿ ಮೋದಿ

Update: 2026-07-31 23:09 IST

Photo :x.com/narendramodi

ಬೆಂಗಳೂರು : ಮೈಸೂರಿನಲ್ಲಿ ಆಗಸ್ಟ್ 1 ರಂದು, ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ‘ವಿವೇಕ ಸ್ಮಾರಕ' ಉದ್ಘಾಟನೆಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಶುಕ್ರವಾರ ಈ ಸಂಬಂಧ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, 1892ರಲ್ಲಿ ಸ್ವಾಮಿ ವಿವೇಕಾನಂದರು ಮೈಸೂರಿಗೆ ನೀಡಿದ್ದ ಐತಿಹಾಸಿಕ ಭೇಟಿಯ ನೆನಪಿನಲ್ಲಿ ‘ವಿವೇಕ ಸ್ಮಾರಕ’ ನಿರ್ಮಾಣಗೊಂಡಿದೆ. ಈ ವಿವೇಕ ಸ್ಮಾರಕವು ತರಗತಿ ಕೊಠಡಿಗಳು, ಗ್ರಂಥಾಲಯ, ಧ್ಯಾನ ಮತ್ತು ಯೋಗ ಮಂದಿರ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ.

ನಮ್ಮ ಯುವಜನತೆಯನ್ನು ಸಬಲೀಕರಣಗೊಳಿಸುವಲ್ಲಿ ಹಾಗೂ ಸ್ವಾಮಿ ವಿವೇಕಾನಂದರ ಉದಾತ್ತ ಚಿಂತನೆಗಳನ್ನು ಪ್ರಚುರಪಡಿಸುವಲ್ಲಿ ಇದು ಮುಂಚೂಣಿಯಲ್ಲಿರಲಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News