×
Ad

ಆ.10ಕ್ಕೆ 'ನಮ್ಮ ಮೆಟ್ರೊ ಹಳದಿ ಮಾರ್ಗ'ದಲ್ಲಿ ರೈಲು ಸಂಚಾರಕ್ಕೆ ಪ್ರಧಾನಿ ಚಾಲನೆ

Update: 2025-08-03 10:46 IST
ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರದ ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರ ವರೆಗಿನ 19.50 ಕಿ.ಮೀ. ನಮ್ಮ ಮೆಟ್ರೊ ಹಳದಿ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಆ. 10ರಂದು ಹಸಿರು ನಿಶಾನೆ ತೋರಿಸಲಿದ್ದಾರೆ.

ಈ ಬಗ್ಗೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

5,056.99 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನಮ್ಮ ಮೆಟ್ರೊ ಹಳದಿ ಮಾರ್ಗವು 16 ನಿಲ್ದಾಣಗಳನ್ನು ಒಳಗೊಂಡಿವೆ. ಇದೇ ವೇಳೆ 15,611 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುವ ಬೆಂಗಳೂರು ಹಂತ-3ರ 44.65 ಕಿ.ಮೀ. ಉದ್ದದ ರೈಲು ಮಾರ್ಗಕ್ಕೆ ಪ್ರಧಾನಿ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದವರು ಮಾಹಿತಿ ನೀಡಿದ್ದಾರೆ.

ಹಳದಿ ಮಾರ್ಗವು ಬೊಮ್ಮಸಂದ್ರ, ಹೆಬ್ಬಗೋಡಿ, ಹುಸ್ಕೂರು ರಸ್ತೆ, ಇನ್ಫೊಸಿಸ್ ಫೌಂಡೇಷನ್ (ಕೋನಪ್ಪನ ಅಗ್ರಹಾರ), ಎಲೆಕ್ಟ್ರಾನಿಕ್ ಸಿಟಿ, ಬೆರಟೇನ ಅಗ್ರಹಾರ, ಹೊಸ ರಸ್ತೆ, ಸಿಂಗಸಂದ್ರ, ಕೂಡ್ಲು ಗೇಟ್, ಹೊಂಗಸಂದ್ರ, ಬೊಮ್ಮನಹಳ್ಳಿ, ಸೆಂಟ್ರಲ್ ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಜಯದೇವ ಆಸ್ಪತ್ರೆ, ರಾಗಿಗುಡ್ಡ, ಆರ್.ವಿ. ರಸ್ತೆ ನಿಲ್ದಾಣಗಳನ್ನು ಹೊಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News