×
Ad

ಸೆ.22ಕ್ಕೆ ಪಿಎಸ್‍ಐ ಪರೀಕ್ಷೆ

Update: 2024-09-02 21:33 IST

ಬಂಗಳೂರು: ಒಟ್ಟು 402 ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಹುದ್ದೆಗಳಿಗೆ ಇದೇ ಸೆ.22ರಂದು ಲಿಖಿತ ಪರೀಕ್ಷೆ ನಡೆಯಲಿದ್ದು ಇದಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ನಡೆಸಿದೆ. ಒಟ್ಟು 66,000 ಮಂದಿ ಅರ್ಜಿ ಸಲ್ಲಿಸಿದ್ದು, ಪರೀಕ್ಷೆಗೆ ಒಂದು ವಾರ ಮೊದಲು ಪ್ರವೇಶ ಪತ್ರ ಬಿಡುಗಡೆ ಮಾಡಲಾಗುವುದು.

ಇದಲ್ಲದೆ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ ಪರೀಕ್ಷೆ ಸೆ.29ರಂದು ನಡೆಯಲಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮಾತ್ರ ಅ.27ಕ್ಕೆ ನಡೆಯುವ ಪ್ರಮುಖ ಪರೀಕ್ಷೆಗೆ ಅರ್ಹತೆ ಪಡೆಯಲಿದ್ದಾರೆ. ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ 5.7 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದು ಈ ಪರೀಕ್ಷೆಗೂ ತಯಾರಿ ನಡೆಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News