×
Ad

ಪಿಎಸ್ಐ ಪರೀಕ್ಷೆ | ತಾತ್ಕಾಲಿಕ ಫಲಿತಾಂಶ ಪ್ರಕಟ

Update: 2024-11-06 21:06 IST

ಸಾಂದರ್ಭಿಕ ಚಿತ್ರ

ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪರೀಕ್ಷೆ ನಡೆದ 33 ದಿನಗಳಲ್ಲೇ ಪ್ರಕಟಿಸಿದೆ.

ಅ.3ರಂದು ನಡೆದ ಪರೀಕ್ಷೆಯ ಪತ್ರಿಕೆ -1 ಮತ್ತು 2ರಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ವಿವರಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು, ಏನೇ ಆಕ್ಷೇಪಣೆಗಳು ಇದ್ದರೂ ನ.9ರೊಳಗೆ ಅನ್ ಲೈನ್ ಮೂಲಕ ಸಲ್ಲಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಬುಧವಾರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಒಟ್ಟು 402 ಪಿಎಸ್ಐ ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಅಂತಿಮ ಕೀ ಉತ್ತರಗಳನ್ನು ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಈ ಕುರಿತ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News