×
Ad

ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡ ಹಿನ್ನೆಲೆ: ಪುನೀತ್​​​ ಕೆರೆಹಳ್ಳಿ ಮತ್ತೆ ಬಂಧನ

Update: 2026-01-23 10:12 IST

ಪುನೀತ್ ಕೆರೆಹಳ್ಳಿ

ನೆಲಮಂಗಲ : ಅಕ್ರಮ ಗೋ ಸಾಗಾಟ ಸೇರಿದಂತೆ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಹಲವು ಬಾರಿ ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಅಕ್ರಮ ಬಾಂಗ್ಲಾದೇಶಿ ವಲಸಿಗರು ವಾಸಿಸುತ್ತಿದ್ದಾರೆ ಆರೋಪಿಸಿ ಪುನೀತ್ ಕೆರೆಹಳ್ಳಿ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರಕ್ಕೆ ತೆರಳಿದ್ದಲ್ಲದೆ ಈ ಬಗ್ಗೆ ಸೋಲದೇವನಹಳ್ಳಿ ಠಾಣೆಗೆ ದೂರು ನೀಡಿದ್ದ. ದೂರು ನೀಡಿ ಠಾಣೆಯಿಂದ ಹೊರಬರುತ್ತಿದ್ದ ವೇಳೆ ಬಾಗಲಗುಂಟೆ ಪೊಲೀಸ್ ಠಾಣೆಯ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಇದಕ್ಕೂ ಮುನ್ನ ವಲಸಿಗರಿದ್ದ ಶೆಡ್‌ಗಳಿಗೆ ತೆರಳಿ ಬಾಂಗ್ಲಾದೇಶಿಗರೆಂದು ದಾಖಲೆ ತೋರಿಸುವಂತೆ ಒತ್ತಾಯಿಸಿ ಗಲಾಟೆ ನಡೆಸಿದ ಆರೋಪದಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಬಳಿಕ ಆತನ ಬಂಧನ ಮತ್ತು ಬಿಡುಗಡೆಯಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News