×
Ad

ರಾಜಕೀಯ ದ್ವೇಷ ತೀರಿಸಿಕೊಳ್ಳಲು ಪೊಲೀಸರ ಬಳಕೆ : ಆರ್.ಅಶೋಕ್

Update: 2025-04-04 20:22 IST

ಬೆಂಗಳೂರು : ರಾಜ್ಯದಲ್ಲಿ ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ. ಪೊಲೀಸರನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳಲು ಬಳಸಿಕೊಳ್ಳಲಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆ ನಮ್ಮ ಕಾರ್ಯಕರ್ತರಿಗೆ ನೋವು ತಂದಿದೆ. ವಿನಯ್ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಆಗಬೇಕು ಎಂದರು.

ವಿನಯ್ ಒಳ್ಳೆಯ ವಿದ್ಯಾವಂತ, ಪತ್ನಿ ಸಾಫ್ಟ್‌ವೇರ್ ಇಂಜಿನಿಯರ್. ಮೂರು ತಿಂಗಳಿಂದ ಎಸ್ಪಿ ಮೂಲಕ ಕಾಂಗ್ರೆಸ್ ಶಾಸಕರು, ಶಾಸಕರ ಆಪ್ತ ತೆನ್ನೀರ ಮಹಿನಾ ಕಿರುಕುಳ ನೀಡಿದ್ದಾರೆ. ಶಾಸಕ ಪೊನ್ನಣ್ಣ ಧಮ್ಕಿ ಹಾಕಿದ್ದನ್ನು ವಿನಯ್ ತನ್ನ ಡೆತ್‍ನೋಟ್‍ನಲ್ಲಿ ಉಲ್ಲೇಖ ಮಾಡಿದ್ದಾರೆ. ವಿನಯ್ ಮಡಿಕೇರಿ ಬಿಟ್ಟು ಬೆಂಗಳೂರಿನ ಮನೆಗೆ ಬಂದರೂ ಪೊಲೀಸರು ಕಿರುಕುಳ ಕೊಟ್ಟಿದ್ದಾರೆ ಎಂದು ಆರ್.ಅಶೋಕ್ ಕಿಡಿಕಾರಿದರು.

ವಿನಯ್ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಆಗಬೇಕು, ಅದಕ್ಕಾಗಿ ಸೂಕ್ತ ತನಿಖೆ ಆಗಬೇಕು. ಕೊಡಗು ಎಸ್ಪಿ ಅಮಾನತು ಆಗಬೇಕು. ಈ ಸಂಬಂಧ ನಮ್ಮ ಹೋರಾಟದ ಬಗ್ಗೆ ತೀರ್ಮಾನಿಸುತ್ತೇವೆ. ತೆನ್ನೀರಾ, ಪೊನ್ನಣ್ಣ, ಮಂತರ್ ಗೌಡ ವಿರುದ್ಧ ದೂರು ನೀಡಿದ್ದೇವೆ ಎಂದು ಆರ್.ಅಶೋಕ್ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News