ಮುಜರಾಯಿ ವ್ಯಾಪ್ತಿಯ ಎಲ್ಲಾ ದೇವಾಲಯಗಳಲ್ಲಿ ಭಾರತೀಯ ಸೇನೆ ಹೆಸರಿನಲ್ಲಿ ವಿಶೇಷ ಪೂಜೆ : ರಾಮಲಿಂಗಾ ರೆಡ್ಡಿ
Update: 2025-05-07 18:36 IST
ಬೆಂಗಳೂರು : ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ, ಇಂದು ಮುಂಜಾನೆ ಭಾರತವು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ ಎಂದು ಮುಜುರಾಯಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ನಮ್ಮ ಭಾರತದ ಹೆಮ್ಮೆಯ ಸೇನಾ ಕಾರ್ಯಾಚರಣೆಗೆ ಶುಭಾಶಯಗಳು. ಈ ಸಂದರ್ಭದಲ್ಲಿ ಮುಜರಾಯಿ ಇಲಾಖಾ ವ್ಯಾಪ್ತಿಯ ಎಲ್ಲಾ ದೇವಾಲಯಗಳಲ್ಲಿ ಭಾರತೀಯ ಸೇನೆಯ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿ, ಆ ದೇವರು ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದರು.