×
Ad

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ : ವಿಕಾಸಸೌಧದಲ್ಲಿ ಮಹಜರು

Update: 2024-11-08 18:57 IST

 ಮುನಿರತ್ನ

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ವಿಶೇಷ ತನಿಖಾ ದಳ(ಎಸ್‌ಐಟಿ) ಸಂತ್ರಸ್ತೆಯನ್ನು ವಿಕಾಸಸೌಧಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಿದ್ದಾರೆ.

ಈ ಹಿಂದೆ ತೋಟಗಾರಿಕಾ ಸಚಿವರಾಗಿದ್ದ ಸಂದರ್ಭದಲ್ಲಿ ವಿಕಾಸಸೌಧದಲ್ಲಿ ಮುನಿರತ್ನಗೆ ನೀಡಿದ್ದ ಮೂರನೆ ಮಹಡಿಯ 334ನೇ ಕೊಠಡಿಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು ನಡೆಸಿದರು.

ಯಾವ ಸ್ಥಳದಲ್ಲಿ ಮುನಿರತ್ನ ಲೈಂಗಿಕ ದೌರ್ಜನ್ಯ ಎಸಗಿದರು ಎಂಬುದೂ ಸೇರಿದಂತೆ ವಿವಿಧ ಪ್ರಶ್ನೆಗಳನ್ನು ಕೇಳಿ, ಸಂತ್ರಸ್ತೆಯಿಂದ ಲಿಖಿತ ಮತ್ತು ಮೌಖಿಕ ಹೇಳಿಕೆ ಪಡೆದುಕೊಂಡರು. ಈ ಪ್ರಕ್ರಿಯೆಯನ್ನು ವಿಡಿಯೋ ಮಾಡಿಕೊಳ್ಳಲಾಗಿದೆ.

ಸೆ.18ರಂದು ಸಂತ್ರಸ್ತೆ ನೀಡಿದ ದೂರಿನ ಅನ್ವಯ ಕಗ್ಗಲಿಪುರ ಠಾಣೆ ಪೊಲೀಸರು ಸೆ.21ರಂದು ಮುನಿರತ್ನ ಅವರನ್ನು ಬಂಧಿಸಿದ್ದರು. ಬಳಿಕ ಆರೋಪಿ ಹಾಗೂ ಸಂತ್ರಸ್ತೆಯನ್ನು ಕರೆದೊಯ್ದು ಸ್ಥಳ ಮಹಜರು ಮಾಡಿಸಿದ್ದರು. ಮೊಬೈಲ್‍ಗಳನ್ನು ಜಪ್ತಿ ಮಾಡಿ, ವಿಧಿವಿಜ್ಞಾನ ಪ್ರಯೋಗಾಲಯಕ್ಕೂ ಕಳುಹಿಸಿದ್ದರು. ಮುನಿರತ್ನರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News