×
Ad

ಸರಕಾರದಲ್ಲಿ ಏನೇನು ಕರ್ಮಕಾಂಡ ನಡೆಯುತ್ತಿದೆಯೋ ಆ ಪರಮಾತ್ಮನಿಗೆ ಗೊತ್ತು: ಆರ್.ಅಶೋಕ್

Update: 2025-02-18 18:41 IST

ಬೆಂಗಳೂರು: ‘ಹೊರ ಹೋಗುವ’(ಔಟ್ ಗೋಯಿಂಗ್) ಸಿಎಂ ಸಿದ್ದರಾಮಯ್ಯನವರೇ, ತಮಗೆ ಗೊತ್ತಿಲ್ಲದೆ ತಮ್ಮ ಸರಕಾರದಲ್ಲಿ ಇನ್ನೂ ಏನೇನು ಕರ್ಮಕಾಂಡ ನಡೆಯುತ್ತಿದೆಯೋ ಆ ಪರಮಾತ್ಮನಿಗೆ ಗೊತ್ತು. ತಮಗೆ ಗೊತ್ತಿಲ್ಲದೆ ಯಾವ್ಯಾವ ಮಂತ್ರಿಗಳು, ಶಾಸಕರು ಅದೆಷ್ಟು ಲೂಟಿ ಹೊಡೆಯುತ್ತಿದ್ದಾರೋ ಆ ದೇವರೇ ಬಲ್ಲ’ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಇಂದಿಲ್ಲಿ ಲೇವಡಿ ಮಾಡಿದ್ದಾರೆ.

ಮಂಗಳವಾರ ಎಕಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ಮುಡಾ ಹಗರಣದಿಂದ ಬಚಾವಾಗಲು, ಅಧಿಕಾರ ಹಂಚಿಕೆಯ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ರಣತಂತ್ರ ಹಣೆಯುವಲ್ಲಿ ಸಂಪೂರ್ಣವಾಗಿ busy ಆಗಿರುವ outgoing ಸಿಎಂ ಸಿದ್ದರಾಮಯ್ಯರಿಗೆ ಪಾಪ ಮೂರು ತಿಂಗಳಿನಿಂದ ಅನ್ನಭಾಗ್ಯದ ಹಣ, ಗೃಹಲಕ್ಷ್ಮಿ ಹಣ ಪಾವತಿ ಬಾಕಿ ಇರುವುದೇ ಗೊತ್ತಿಲ್ಲವಂತೆ’ ಎಂದು ಟೀಕಿಸಿದ್ದಾರೆ.

‘ಕರ್ನಾಟಕ ಕಂಡ ಅತ್ಯಂತ ಅಸಮರ್ಥ ಮುಖ್ಯಮಂತ್ರಿ ಎಂಬ ಹಣೆಪಟ್ಟಿ ಕಟ್ಟಿಕೊಳ್ಳುವುದಕ್ಕಿಂತ ಮೊದಲು ಈಗಲಾದರೂ ರಾಜೀನಾಮೆ ಕೊಟ್ಟು ಗೌರವದಿಂದ ನಿರ್ಗಮಿಸಿ. ತಾವು ಕುರ್ಚಿಗೆ ಅಂಟಿಕೊಂಡು ಕೂತಷ್ಟೂ ತಮ್ಮ ಗೌರವ, ವರ್ಚಸ್ಸು ಮತ್ತಷ್ಟು ಕಡಿಮೆ ಆಗುವುದಂತೂ ಗ್ಯಾರೆಂಟಿ’ ಎಂದು ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News