ದರ್ಶನ್‌/ರೇಣುಕಾಸ್ವಾಮಿ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿಯಾಗಿ ಈಗ ಮಾಫಿ ಸಾಕ್ಷಿಯಾಗಿ ಹೇಳಿಕೆ ನೀಡಿರುವ ಪ್ರದೂಶ್ ರಾವ್ ಕ್ರಮವನ್ನು ಪ್ರಶ್ನೆ ಮಾಡಿರುವ ಅರ್ಜಿಯ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ.

ಈಗಾಗಲೇ ಪ್ರದೂಶ್ ರಾವ್ ನಿಂದ ವಿಚಾರಣಾ ನ್ಯಾಯಾಲಯ ನಾಲ್ಕು ದಿನಗಳ 114 ಪುಟಗಳ ಮಾಫಿ ಸಾಕ್ಷಿಯನ್ನ ಈಗಾಗಲೇ ದಾಖಲು ಮಾಡಿದೆ. ಪ್ರದೂಶ್ ರಾವ್ ಮಾಫಿ ಸಾಕ್ಷಿ ಆಗುತ್ತೇನೆ ಎಂದಾಗಲೇ ದರ್ಶನ್ ಪರ ವಕೀಲರು ಇದಕ್ಕೆ ತೀವ್ರ ಅಕ್ಷೇಪ ವ್ಯಕ್ತ ಪಡಿಸಿದ್ದರು. ಆದರೆ ವಿಚಾರಣಾ ನ್ಯಾಯಾಲಯ ಹಾಗೂ ಹೈಕೋರ್ಟ್ ಮಾಫಿ ಸಾಕ್ಷಿ ಕ್ರಮವನ್ನು ಎತ್ತಿ ಹಿಡಿದಿದ್ದವು.

ಈ ಹಿನ್ನಲೆ ದರ್ಶನ್ ಪರ ವಕೀಲರು ಹೈಕೋರ್ಟ್ ಅದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ದರ್ಶನ್ ಪರ ಅರ್ಜಿಯನ್ನು ಇಂದು ನ್ಯಾಯಮೂರ್ತಿಗಳಾದ ಜೆ.ಬಿ ಪರ್ದಿವಾಲಾ ಹಾಗೂ ಕೆ.ಬಿ ವಿನೋದ್ ಚಂದ್ರನ್ ಇರುವ ವಿಭಾಗೀಯ ಪೀಠ ವಿಚಾರಣೆ ನಡೆಸಲಿದೆ. ವಿಶೇಷತೆ ಎಂದರೆ ಇದೇ ಪೀಠದಲ್ಲಿ ದರ್ಶನ್ ಹಾಗೂ ಸಹಚರರಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ರದ್ದಾಗಿತ್ತು. ಈಗ ಅದೇ ಪೀಠದಲ್ಲಿ ಮಾಫಿ ಸಾಕ್ಷಿ ವಿಚಾರಣೆ ನಡೆಯಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor