×
Ad

ರೇಣುಕಾಸ್ವಾಮಿ ಕೊಲೆ ಪ್ರಕರಣ : ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಕೆ

Update: 2024-11-23 20:42 IST

ದರ್ಶನ್ | ರೇಣುಕಸ್ವಾಮಿ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಇಲ್ಲಿನ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು, 1,300 ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್ ಅನ್ನು 57ನೇ ಸಿಸಿಎಚ್ ನ್ಯಾಯಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.

ಪ್ರಮುಖವಾಗಿ ಎಫ್ಎಸ್ಎಲ್ ವರದಿ, ಸಾಕ್ಷ್ಯಗಳ ಹೇಳಿಕೆಗಳು, ಆರೋಪಿ ಪುನೀತ್ ಮೊಬೈಲ್ ನಿಂದ ರಿಟ್ರೀವ್ ಮಾಡಲಾದ 8 ಫೋಟೊಗಳು ಸೇರಿದಂತೆ ಮಹತ್ವದ ಅಂಶಗಳನ್ನು ಒಳಗೊಂಡಿರುವ ಹೆಚ್ಚುವರಿ ಚಾರ್ಜ್ ಶೀಟ್ ಈಗ ಸಲ್ಲಿಕೆ ಆಗಿದೆ ಎಂದು ಮೂಲಗಳು ತಿಳಿಸಿವೆ.

ಬೆನ್ನುಹುರಿ ನೋವಿನಿಂದ ಬಳಲುತ್ತಿದ್ದು, ಅಗತ್ಯ ಚಿಕಿತ್ಸೆ ಪಡೆಯಲು ಜಾಮೀನು ಮಂಜೂರು ಮಾಡಬೇಕು ಎಂದು ಅರ್ಜಿಯಲ್ಲಿ ದರ್ಶನ್ ಕೋರಿದ್ದರು. ಬಳಿಕ ಆರೋಗ್ಯ ತಪಾಸಣೆಗಾಗಿ ಹೈಕೋರ್ಟ್ 6 ವಾರಗಳ ಕಾಲ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇದರ ನಡುವೆ ಹೆಚ್ಚುವರಿ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News