×
Ad

‘ಬರ ನಿರ್ವಹಣೆ’ ಪರಿಶೀಲನೆ: ನಾಳೆ(ಮಾ.5) ಸಿಎಂ ವೀಡಿಯೊ ಸಂವಾದ

Update: 2024-03-04 20:28 IST

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ(ಮಾ.5) ಬೆಳಗ್ಗೆ 11 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಮತ್ತಿತರ ವಿಷಯಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಯದರ್ಶಿಗಳು ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.

ಈ ವಿಡಿಯೋ ಸಂವಾದದಲ್ಲಿ ಎಲ್ಲ ಜಿಲ್ಲೆಗಳ ಕುಡಿಯುವ ನೀರು, ಬರ ನಿರ್ವಹಣೆ, ಜಾನುವಾರು ಮೇವು, ಉದ್ಯೋಗ ಹಾಗೂ ಕೃಷಿ ವಿಷಯಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News