ರೋಹಿತ್ ವೆಮುಲಾ ಕಾಯ್ದೆ ಕುರಿತು ಪರಿಶೀಲಿಸಿ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ
Update: 2025-04-21 18:30 IST
ಬೆಂಗಳೂರು: ರೋಹಿತ್ ವೆಮುಲಾ ಕಾಯ್ದೆಯ ಕರಡು ಸಿದ್ಧಪಡಿಸುವಂತೆ ಕಾನೂನು ಸಲಹೆಗಾರರಿಗೆ ಸೂಚನೆ ನೀಡಲಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರಿಗೆ ಪತ್ರ ಕೂಡ ಬರೆದಿದ್ದೇನೆ. ಸಾಧ್ಯತೆಗಳನ್ನು ಪರಿಶೀಲಿಸಿ ಕಾಯ್ದೆ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.
ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ :
ಸಿ.ಇ.ಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಕ್ರಮ ನಿಯಮ ಬಾಹಿರವಾದುದ್ದು. ಪರೀಕ್ಷೆಯಲ್ಲಿ ಅಕ್ರಮ ನಡೆಸಬಹುದಾದ ಸಾಧ್ಯತೆಗಳನ್ನು ಪರಿಗಣಿಸಿ ಮಾತ್ರವೇ ಕ್ರಮ ಕೈಗೊಳ್ಳಬೇಕು, ವಿನಃ ಹೀಗೆ ಅನವಶ್ಯಕವಾಗಿ ಇತರರ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾದ ನಿಯಮ ಹೇರಿಕೆ ಮಾಡಬಾರದು. ಇಂಥದ್ದನ್ನು ನಾವು ಸಹಿಸುವುದಿಲ್ಲ. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.