×
Ad

ರುದ್ರಪ್ಪ ಲಮಾಣಿ ಅವರಿಗೆ ಸ್ಪೀಕರ್ ಕರ್ತವ್ಯಗಳ ಹೊಣೆ

Update: 2026-06-04 01:05 IST

ಬೆಂಗಳೂರು : ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ಅವರು ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾದ ಸ್ಪೀಕರ್ ಸ್ಥಾನದ ಕರ್ತವ್ಯಗಳನ್ನು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ನಿರ್ವಹಿಸಲಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ತಿಳಿಸಿದ್ದಾರೆ.

ಸ್ಪೀಕರ್ ಯು.ಟಿ.ಖಾದರ್ ಅವರು, ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಸ್ಪೀಕರ್ ಸ್ಥಾನಕ್ಕೆ ಖಾದರ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News