×
Ad

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

Update: 2026-03-10 00:55 IST

ಸತೀಶ್ ಜಾರಕಿಹೊಳಿ

ಬೆಂಗಳೂರು : ‘ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು(ಆರೆಸೆಸ್ಸ್) ಯಾರೂ ನಿಷೇಧ ಮಾಡಿಲ್ಲ, ಯಾರೂ ನಿಷೇಧ ಮಾಡಲು ಆಗುವುದಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರೆಸೆಸ್ಸ್ ಸಂಘಟನೆ ನಿಷೇಧಕ್ಕೂ ಮತ್ತು ಅದರ ಕಾರ್ಯ ಚಟುವಟಿಕಗಳನ್ನು ನಿರ್ಬಂಧಿಸುವುದಕ್ಕೂ ವ್ಯತ್ಯಾಸವಿದೆ. ನಮ್ಮ ಸರಕಾರ ಅಥವಾ ಬೇರೆ ಯಾವುದೇ ಸರಕಾರವೂ ಆರೆಸೆಸ್ಸ್ ಅನ್ನು ನಿಷೇಧಿಸುವ ಬಗ್ಗೆ ಎಲ್ಲಿಯೂ ಹೇಳಿಲ್ಲ ಎಂದು ನುಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News