×
Ad

ಲೈಂಗಿಕ ಹಗರಣ‌ : ಪ್ರಜ್ವಲ್‍ಗೆ ವೈದ್ಯಕೀಯ ಪರೀಕ್ಷೆ

Update: 2024-06-03 21:25 IST

ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಲೈಂಗಿಕ ಹಗರಣ ಆರೋಪ ಪ್ರಕರಣದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ತನಿಖಾಧಿಕಾರಿಗಳು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು.

ಸೋಮವಾರ ಇಲ್ಲಿನ ಬೌರಿಂಗ್ ಆಸ್ಪತ್ರೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಆ್ಯಂಬುಲೆನ್ಸ್‌ ನಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಸಾಮಾನ್ಯ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ವೈದ್ಯರ ಬಳಿ ವರದಿ ಪಡೆದುಕೊಂಡರು.

ಬೌರಿಂಗ್ ವೈದ್ಯಕೀಯ ಕಾಲೇಜು ನಿರ್ದೇಶಕ ಸೇರಿದಂತೆ ಹಿರಿಯ ವೈದ್ಯರ ಸಮ್ಮುಖದಲ್ಲಿ ಪರೀಕ್ಷೆ ನಡೆಸಲಾಗಿದೆ.

ಜೂನ್ 4 ರಂದು ಲೋಕಸಭಾ ಚುನಾವಣೆಯ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ varthabharati.in ನೋಡ್ತಾ ಇರಿ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News