ಡಾ.ಜಯದೇವಿ ತಾಯಿ ಲಿಗಾಡೆ, ಪ್ರಭುರಾವ್ ಕಂಬಳಿವಾಲೆ ಟ್ರಸ್ಟ್ ರಚನೆಗೆ ನಿರ್ಧಾರ : ಸಚಿವ ಶಿವರಾಜ ತಂಗಡಗಿ
ಬೆಂಗಳೂರು : ಕನ್ನಡದ ಹಿರಿಯ ಸಾಹಿತಿ ಡಾ. ಜಯದೇವಿ ತಾಯಿ ಲಿಗಾಡೆ ಹಾಗೂ ಕನ್ನಡ ಹೋರಾಟಗಾರ ಪ್ರಭುರಾವ್ ಕಂಬಳಿವಾಲೆ ಅವರ ಹೆಸರಿನಲ್ಲಿ ಟ್ರಸ್ಟ್ ಗಳನ್ನು ರಚಿಸಲು ನಿರ್ಧರಿಸಲಾಗಿದ್ದು, ಈ ಸಂಬಂಧ ಶೀಘ್ರದಲ್ಲಿಯೇ ಆದೇಶ ಹೊರಡಿಸಲಾಗುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
ಸೋಮವಾರ ಈ ಕುರಿತು ಪ್ರಕಟನೆ ನೀಡಿರುವ ಅವರು, ಹೈದರಾಬಾದ್ ಕರ್ನಾಟಕದ ಜನತೆಯ ಬಹುದಿನದ ಅಪೇಕ್ಷೆಯಂತೆ ಈ ಎರಡು ಟ್ರಸ್ಟ್ ಗಳನ್ನು ರಚಿಸುವ ಸಂಬಂಧ ಬಂದಿದ್ದ ಪ್ರಸ್ತಾವಕ್ಕೆ ಈಗಾಗಲೇ ಅನುಮೋದನೆ ನೀಡಲಾಗಿದ್ದು, ಈ ಸಂಬಂಧ ಕೂಡಲೇ ಆದೇಶ ಹೊರಡಿಸುವಂತೆ ಇಲಾಖೆಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದೇನೆ ತಿಳಿಸಿದ್ದಾರೆ.
ಕನ್ನಡದ ಹಿರಿಯ ಸಾಹಿತಿ ಡಾ. ಜಯದೇವಿ ತಾಯಿ ಲಿಗಾಡೆ ಹಾಗೂ ಕನ್ನಡ ಹೋರಾಟಗಾರ ಪ್ರಭುರಾವ್ ಕಂಬಳಿವಾಲೆ ಅವರು ಕನ್ನಡ ಭಾಷೆ, ಸಾಹಿತ್ಯ ಮತ್ತು ಸಾಂಸ್ಕೃ ತಿಕ ಜಗತ್ತಿಗೆ ನೀಡಿದ ಕೊಡುಗೆ ಅನನ್ಯವಾದದ್ದು, ಹಾಗಾಗಿ ಈ ಟ್ರಸ್ಟ್ ಗಳನ್ನು ಅವರ ಆಶಯಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಲು ರಚಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಎರಡು ಟ್ರಟ್ರಸ್ಟ್‌ಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ಬೀದರ್ ಜಿಲ್ಲೆಯ ಉಸ್ತುವಾರಿ ಸಚಿವರ ಜೊತೆ ಚರ್ಚಿಸಿ ನೇಮಕ ಮಾಡಲಾಗುವುದು ಎಂದು ಹೇಳಿದ್ದಾರೆ.