×
Ad

ನನ್ನ ತಾಕತ್ ಟೆಸ್ಟ್ ಮಾಡಬೇಕು ಅಂದ್ರೆ ಶೋಭಾ ಕ್ಷೇತ್ರಕ್ಕೆ ಬರಲಿ : ಎಸ್‌.ಟಿ.ಸೋಮಶೇಖರ್ ವಾಗ್ದಾಳಿ

Update: 2024-11-09 16:44 IST

ಶೋಭಾ ಕರಂದ್ಲಾಜೆ/ಎಸ್‌.ಟಿ.ಸೋಮಶೇಖರ್ 

ಬೆಂಗಳೂರು: ಯಶವಂತಪುರ ಬಿಜೆಪಿ ಶಾಸಕ ಎಸ್‌.ಟಿ.ಸೋಮಶೇಖರ್ ಅವರು ತಮ್ಮದೇ ಪಕ್ಷದ ನಾಯಕಿ ಶೋಭಾ ಕರಂದ್ಲಾಜೆಯವರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದು, ʼನನ್ನ ತಾಕತ್ ಬಗ್ಗೆ ಅವಳು ಟೆಸ್ಟ್ ಮಾಡಬೇಕು ಅಂದರೆ ಕ್ಷೇತ್ರಕ್ಕೆ ಬರಲಿʼ ಎಂದು ಸವಾಲು ಹಾಕಿದ್ದಾರೆ.

ಚನ್ನಪಟ್ಟಣ ಉಪಚನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಎಸ್.ಟಿ.ಸೋಮಶೇಖರ್ ಅವರು ಭಾಗವಹಿಸಿದ್ದರು.

ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಸೋಮಶೇಖರ್ ಗೆ ತಾಕತ್ ಇದ್ದರೆ ರಾಜೀನಾಮೆ ಕೊಟ್ಟು ಕಾಂಗ್ರೆಸ್‌ನಿಂದ ಗೆದ್ದು ತೋರಿಸಲಿ ಎಂದು ಹೇಳಿದ್ದರು.

ಈ ಸಂಬಂಧ ಬೆಂಗಳೂರಿನಲ್ಲಿ ಕೇಂದ್ರ ಸಚಿವೆಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸೋಮಶೇಖರ್ ಅವರು, "ನನ್ನ ತಾಕತ್ ಬಗ್ಗೆ ಅವಳು ಟೆಸ್ಟ್ ಮಾಡಬೇಕು ಅಂದರೆ ಕ್ಷೇತ್ರಕ್ಕೆ ಬರಲಿ. ಅವಳು ಸಂಸದೆ ಸ್ಥಾನಕ್ಕೆ ರಾಜೀನಾಮೆ ಕೊಡಲಿ, ನಾನೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ" ಎಂದು ತಿರುಗೇಟು ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News